ಭಟ್ಕಳ: ಅರಣ್ಯ ಇಲಾಖೆಯ ಸ್ಥಳದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ
ಭಟ್ಕಳ: ಇಲ್ಲಿನ ಸಾಗರ ರಸ್ತೆಯಲ್ಲಿರುವ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಎದುರಿನಲ್ಲಿನ ಅರಣ್ಯ ಇಲಾಖೆಯ ಸ್ಥಳದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹಿರಿಯ ಸಿವಿಲ್ ನ್ಯಾಯಾಧೀಶೆ ರೇಣುಕಾ ಡಿ. ರಾಯ್ಕರ್ ಅವರು ಮಾತನಾಡಿ ಪರಿಸರ ಉಳಿಸಿ ಬೆಳೆಸುವುದು ಅತ್ಯಂತ ಮುಖ್ಯವಾಗಿದ್ದು ನಾವು ಪರಿಸರ ಉಳಿಸಿಕೊಳ್ಳದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಆಮ್ಲಜನಕ ಸಿಲಿಂಡರ್ ಹಿಡಿದು ತಿರುಗಾಡುವ ಪರಿಸ್ಥಿತಿ ಬರಬಹುದು. ಅರಣ್ಯ ಇಲಾಖೆ ಬೀಜ ಬಿತ್ತೋತ್ಸವ ಕಾರ್ಯಕ್ರಮದ ಮೂಲಕ ಜನಸಾಮಾನ್ಯರಲ್ಲಿಯೂ ಪರಿಸರ ಕಾಳಜಿ ಬೆಳೆಸುತ್ತಿರುವುದು ಸಂತಸದ ವಿಷಯ ಎಂದರು.
ಹೊನ್ನಾವರ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಮಾತನಾಡಿ ಭೂ ಮಂಡಲದಲ್ಲಿ ಮಾನವ ಯೋಗ್ಯ ಎನ್ನುವ ಗ್ರಹವೊಂದಿದ್ದರೆ ಅದು ಭೂಮಿ ಮಾತ್ರ ಅದನ್ನು ಕಾಪಾಡಿಕೊಳ್ಳುವಲ್ಲಿ ಪರಿಸರ ಕಾಳಜಿ ಅಗತ್ಯ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಧಾನ ಸಿವಿಲ್ ನ್ಯಾಯಾಧೀಶ ವಿನೋದ ಬಾಳನಾಯ್ಕ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಫವಾಝ್ ಪಿ.ಎ., ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್., ತಾಲೂಕಾ ಆಸ್ಪತ್ರೆಯ ವೈದ್ಯ ಡಾ. ಸುಬ್ರಹ್ಮಣ್ಯ ಹೆಗಡೆ, ಅಗ್ನಿಶಾಮಕ ಅಧಿಕಾರಿ ರಮೇಶ ನಾಯ್ಕ, ರೋಟರಿ ಕುಂದಾಪುರ ಸೌತ್ ಅಧ್ಯಕ್ಷ ಮಹೇಂದ್ರ ಶೆಟ್ಟಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕಾ ಪಂಚಾಯತ್ ಕಾ.ನಿ.ಅಧಿಕಾರಿ ಪ್ರಭಾಕರ ಚಿಕ್ಕನಮನೆ, ವಲಯ ಅರಣ್ಯಾಧಿಕಾರಿ ಶರತ್ ಶೆಟ್ಟಿ, ಮಂಕಿ ವಲಯ ಅರಣ್ಯಾಧಿಕಾರಿ ಸವಿತಾ ದೇವಡಿಗ, ಜೆ.ಸಿ.ಐ. ಅಧ್ಯಕ್ಷ ಪಾಂಡುರಂಗ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.
ವಿವಿಧ ಸಂಘ ಸಂಸ್ಥೆಗಳು, ಶಾಲಾ ಮಕ್ಕಳು, ಸ್ಕೌಟ್ಟ ಎಂಡ್ ಗೈಡ್ಸ್ ಕೆಡೆಟ್‍ಗಳು, ಅಗ್ನಿಶಾಮಕ ಸಿಬ್ಬಂದಿಗಳು, ಅರಣ್ಯ ಇಲಾಖೆ ಸಿಬ್ಬಂದಿಗಳು, ಪತ್ರಕರ್ತರು ಸೇರಿ ಬೀಜ ಬಿತ್ತನೆ ಕಾರ್ಯವನ್ನು ನೆರವೇರಿಸಿದರು.