×
Ad

ಬಿಜೆಪಿಯನ್ನು ಸೋಲಿಸಲು ಜೆಡಿಎಸ್‌ ಅಭ್ಯರ್ಥಿಯನ್ನು ಕಾಂಗ್ರೆಸ್‌ ಬೆಂಬಲಿಸಬೇಕು: ಕುಮಾರಸ್ವಾಮಿ

Update: 2022-06-09 11:10 IST

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು, ತನಗಿಂತ ಹೆಚ್ಚು ಮತ ಹೊಂದಿರುವ ಜೆಡಿಎಸ್‌ ಅಭ್ಯರ್ಥಿಯನ್ನು ಕಾಂಗ್ರೆಸ್‌ ಬೆಂಬಲಿಸಬೇಕು ಎಂದು  ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್. ಡಿ.  ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಕೂ ಮಾಡಿರುವ ಅವರು, ಈ ಚುನಾವಣೆಯ ಪರಿಣಾಮಗಳ ಬಗ್ಗೆ ಇತಿಹಾಸ ಮತ್ತು ಜನತೆ ಭವಿಷ್ಯದ ದಿನಗಳಲ್ಲಿ ನಿರ್ಧರಿಸುತ್ತಾರೆ ಎಂದಿದ್ದಾರೆ.

ಉದ್ದಿಮೆದಾರರು, ಸಮಾಜ ಸೇವಕರು ಮತ್ತು ಪ್ರಗತಿಪರ ಚಿಂತಕರಾದ ಡಿ.ಕುಪೇಂದ್ರ ರೆಡ್ಡಿ ಅವರನ್ನು ಜೆಡಿಎಸ್ ಪಕ್ಷ ರಾಜ್ಯಸಭೆ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ ಎಂದು ಹೇಳಿದ್ದಾರೆ.  

'ರಾಜ್ಯಸಭೆ ಸದಸ್ಯರಾಗಿ ಅನುಭವವುಳ್ಳ ಕುಪೇಂದ್ರ ರೆಡ್ಡಿ ಅವರನ್ನು ಎಲ್ಲ ಪಕ್ಷಗಳು ಮುಕ್ತ ಮನಸ್ಸಿನಿಂದ ಬೆಂಬಲಿಸಬೇಕು. ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಕಾಂಗ್ರೆಸ್‌ ಪಕ್ಷ ಕುಪೇಂದ್ರ ರೆಡ್ಡಿ ಅವರಿಗೆ ಪೂರ್ಣ ಬೆಂಬಲ ಕೊಡಬೇಕು' ಎಂದು ಕೋರಿದ್ದಾರೆ. 

Koo App
@jds_official ಪಕ್ಷವು ಡಿ.ಕುಪೇಂದ್ರ ರೆಡ್ಡಿ ಅವರನ್ನು ರಾಜ್ಯಸಭೆ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಅವರು ಉದ್ದಿಮೆದಾರರು, ಸಮಾಜ ಸೇವಕರು ಮತ್ತು ಪ್ರಗತಿಪರ ಚಿಂತಕರು. ರಾಜ್ಯಸಭೆ ಸದಸ್ಯರಾಗಿ ಅನುಭವವುಳ್ಳ ಅವರನ್ನು ಎಲ್ಲ ಪಕ್ಷಗಳು ಮುಕ್ತ ಮನಸ್ಸಿನಿಂದ ಬೆಂಬಲಿಸಬೇಕು. ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಕಾಂಗ್ರೆಸ್‌ ಪಕ್ಷ ಕುಪೇಂದ್ರ ರೆಡ್ಡಿ ಅವರಿಗೆ ಪೂರ್ಣ ಬೆಂಬಲ ಕೊಡಬೇಕು. ಬಿಜೆಪಿಯನ್ನು ಸೋಲಿಸಲು, ತನಗಿಂತ ಹೆಚ್ಚು ಮತ ಹೊಂದಿರುವ ಜೆಡಿಎಸ್‌ ಅನ್ನು ಕಾಂಗ್ರೆಸ್‌ ಬೆಂಬಲಿಸಬೇಕು. ಈ ಚುನಾವಣೆಯ ಪರಿಣಾಮಗಳ ಬಗ್ಗೆ ಇತಿಹಾಸ & ಜನತೆ ಭವಿಷ್ಯದ ದಿನಗಳಲ್ಲಿ ನಿರ್ಧರಿಸುತ್ತಾರೆ.
- H D Kumaraswamy (@h_d_kumaraswamy) 9 June 2022

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News