ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ
Update: 2022-06-09 12:02 IST
ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ವತಿಯಿಂದ ಧರಣಿ ಸತ್ಯಾಗ್ರಹ ನಡೆಯಿತು.
ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ ಪರಿಷ್ಕರಣೆ ರದ್ದುಗೊಳಿಸಿ ಹಿಂದಿನ ಪಠ್ಯಕ್ರಮ ಮುಂದುವರೆಸುವಂತೆ ಆಗ್ರಹಿಸಿ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಿತು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಹಾಲಿ, ಮಾಜಿ ಶಾಸಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.