ದಿಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಈಡಿ ಕಸ್ಟಡಿ ವಿಸ್ತರಣೆ
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದಿಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ಜೂನ್ 13 (ಸೋಮವಾರ) ವರೆಗೆ ಜಾರಿ ನಿರ್ದೇಶನಾಲಯ ಅಥವಾ ಈಡಿ ಕಸ್ಟಡಿಯಲ್ಲಿರುತ್ತಾರೆ.
ಆರ್ಥಿಕ ಅಪರಾಧಗಳ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಎಎಪಿ ನಾಯಕನ ವಿರುದ್ಧ ವಿವಿಧ ದೋಷಾರೋಪಣೆ ದಾಖಲೆಗಳು ಹಾಗೂ ಡಿಜಿಟಲ್ ದಾಖಲೆಗಳನ್ನು ಹೊಂದಿರುವುದಾಗಿ ಹೇಳಿದ ನಂತರ ದಿಲ್ಲಿಯ ಜಿಲ್ಲಾ ನ್ಯಾಯಾಲಯವು ಜೈನ್ ಅವರ ಕಸ್ಟಡಿಯನ್ನು ವಿಸ್ತರಿಸಿದೆ.
ಜೂನ್ 7 ರಂದು ಸತ್ಯೇಂದ್ರ ಜೈನ್, ಅವರ ಪತ್ನಿ ಪೂನಂ ಜೈನ್ ಹಾಗೂ ಅವರ ಸಹಚರರ ಕಟ್ಟಡದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೇ 30 ರಂದು ಜೈನ್ ಅವರನ್ನು ಬಂಧಿಸಲಾಗಿತ್ತು. ಈ ಬಂಧನ ಆಮ್ ಆದ್ಮಿ ಪಕ್ಷ ಹಾಗೂ ಬಿಜೆಪಿ ಆಡಳಿತದ ಕೇಂದ್ರ ಸರಕಾರದ ನಡುವೆ ಹೊಸ ವಾಕ್ಸಮರಕ್ಕೆ ಕಾರಣವಾಯಿತು. ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಈ ಪ್ರಕರಣವು "ಸಂಪೂರ್ಣ ಸುಳ್ಳು" ಎಂದು ಆರೋಪಿಸಿದ್ದರು.