×
Ad

ಮರು ಮೌಲ್ಯ ಮಾಪನ; ಮಲ್ಪೆ ಫ್ಲವರ್ಸ್ ಆಫ್ ಪ್ಯಾರಡೈಸ್ ಸ್ಕೂಲ್‌ಗೆ ಶೇ.100 ಫಲಿತಾಂಶ

Update: 2022-06-09 12:23 IST

ಉಡುಪಿ : ಮರು ಮೌಲ್ಯಮಾಪನದ ಬಳಿಕ ಮಲ್ಪೆ ಫ್ಲವರ್ಸ್ ಆಫ್ ಪ್ಯಾರಡೈಸ್ ಸ್ಕೂಲ್ ಈ ಬಾರಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದುಕೊಂಡಿದೆ.

ಆರಂಭದಲ್ಲಿ ಕೇವಲ ಒಬ್ಬ ವಿದ್ಯಾರ್ಥಿಯು ಒಂದು ವಿಷಯದಲ್ಲಿ ಅನುತ್ತೀರ್ಣನಾಗಿದ್ದು, ನಂತರ ಮರು ಮೌಲ್ಯ ಮಾಪನಕ್ಕೆ ಒಳಪಡಿಸಿದಾಗ ಆ ವಿದ್ಯಾರ್ಥಿ ಉತ್ತೀರ್ಣಗೊಂಡಿದ್ದಾನೆ. ಆ ಮೂಲಕ ಫ್ಲವರ್ಸ್ ಆಫ್  ಪ್ಯಾರಡೈಸ್ ಪಬ್ಲಿಕ್ ಸ್ಕೂಲ್‌ ಶೇ 100 ಫಲಿತಾಂಶ ಪಡೆದಿದೆ.

ಒಟ್ಟು ಪರೀಕ್ಷೆಗೆ ಹಾಜರಾದ 42 ವಿದ್ಯಾರ್ಥಿಗಳಲ್ಲಿ 42 ವಿದ್ಯಾರ್ಥಿಗಳೂ ಪಾಸಾಗಿದ್ದು, ಅದರಲ್ಲಿ 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದು, ಉಳಿದ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News