×
Ad

ಪುರಸಭೆ ಸದಸ್ಯರ ಅನರ್ಹ ಪ್ರಕರಣ: ಚುನಾವಣಾ ಆಯೋಗದ ಆದೇಶ ಎತ್ತಿಹಿಡಿದ ಹೈಕೋರ್ಟ್

Update: 2022-06-09 18:39 IST

ಬೆಂಗಳೂರು, ಜೂ.9: ನಿಯಮಾನುಸಾರ ನಿಗದಿತ ಅವಧಿಯಲ್ಲಿ ಚುನಾವಣಾ ಖರ್ಚು ವೆಚ್ಚದ ವಿವರ ಸಲ್ಲಿಸದ ಆರೋಪದಡಿ ಆನೇಕಲ್ ಪುರಸಭೆಯ ಮೂವರು ಸದಸ್ಯರನ್ನು ಅನರ್ಹಗೊಳಿಸಿದ್ದ ರಾಜ್ಯ ಚುನಾವಣಾ ಆಯೋಗದ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ. 

ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಪುರಸಭೆಯ ಸದಸ್ಯರಾಗಿದ್ದ ಕೆ.ಶ್ರೀನಿವಾಸ್, ಎಸ್.ಲಲಿತಾ ಮತ್ತು ಸಿ.ಕೆ.ಹೇಮಲತಾ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. 

ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಚುನಾವಣಾ ಆಯೋಗದ ಕ್ರಮ ಎತ್ತಿಹಿಡಿದಿರುವ ಏಕಸದಸ್ಯ ಪೀಠದ ಆದೇಶ ಸರಿಯಾಗಿಯೇ ಇದೆ. ಅದರಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News