ಗಣಿ ವ್ಯವಹಾರದ ವ್ಯಾಜ್ಯ: ಮಾಜಿ ಶಾಸಕ ಅನಿಲ್ ಲಾಡ್ ದಾಖಲಿಸಿದ್ದ ದೂರು ರದ್ದುಪಡಿಸಿದ ಹೈಕೋರ್ಟ್

Update: 2022-06-09 13:43 GMT
ಅನಿಲ್ ಲಾಡ್

ಬೆಂಗಳೂರು, ಜೂ.9: ವಂಚನೆ ಹಾಗೂ ಜೀವ ಬೆದರಿಕೆ ಸಂಬಂಧ ಉದ್ಯಮಿ ಆರ್.ಶಿವಕುಮಾರ್ ವಿರುದ್ಧ ಮಾಜಿ ಶಾಸಕ ಅನಿಲ್ ಲಾಡ್ ಸಲ್ಲಿಸಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. 

ಅನಿಲ್ ಲಾಡ್ ದೂರು ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಎಫ್‍ಐಆರ್ ರದ್ದು ಕೋರಿ ಆರ್.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಈ ಆದೇಶ ನೀಡಿದೆ. 

ಉದ್ಯಮಿ ಆರ್.ಶಿವಕುಮಾರ್ ಗಣಿ ವ್ಯವಹಾರಕ್ಕೆ ಸಂಬಂಧಿಸಿದಂತೆ 35 ಕೋಟಿ ಹಣ ಪಡೆದು ವಂಚಿಸಿದ್ದಾರೆ ಹಾಗೂ ಭೂಗತ ಪಾತಕಿ ರವಿ ಪೂಜಾರಿ ಹೆಸರಿನಲ್ಲಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಮಾಜಿ ಶಾಸಕ ಅನಿಲ್ ಲಾಡ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.    
ಅನಿಲ್ ಲಾಡ್ ಅವರು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಿದ್ದು, ಪ್ರಕರಣದಲ್ಲಿ ಈ ಕಾಯ್ದೆ ಅನ್ವಯ ಆಗುವುದಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಅರ್ಜಿದಾರರ ವಿರುದ್ಧದ ದೂರನ್ನು ರದ್ದುಪಡಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News