×
Ad

ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ಇಬ್ಬರು ಪ್ರವಾಸಿಗರು ನಾಪತ್ತೆ

Update: 2022-06-09 23:02 IST

ಭಟ್ಕಳ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಸಮುದ್ರದಲ್ಲಿ ಇಬ್ಬರು ಪ್ರವಾಸಿಗರು ಮುಳುಗಿ ನಾಪತ್ತೆಯಾಗಿದ್ದು, ಮೂವರನ್ನು ರಕ್ಷಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಯುವಕರ ತಂಡ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದು, ಅವರಲ್ಲಿ ಅಬ್ರಾರ್ ಶೇಖ್ (21), ಶಿವಮೊಗ್ಗ ಜಿಲ್ಲೆಯ ಆಗೊಂಬೆಯಿಂದ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ಮೂವರು ಸದಸ್ಯರಲ್ಲಿ ಸುಶಾಂತ್ ಎಂ.ಎಸ್. (23) ಎಂಬವರು ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ ಎಂದು ಮುರುಡೇಶ್ವರ ಪೊಲೀಸರು ಮಾಹಿತಿ ನೀಡಿದ್ದಾರೆ.‌

ಶ್ರೀನಿವಾಸ್‌ಪುರದ 12 ಯುವಕರು ಗುರುವಾರ ಸಂಜೆ ಮುರುಡೇಶ್ವರ ಸಮುದ್ರದಲ್ಲಿ ಈಜುತ್ತಿದ್ದ ವೇಳೆ ದೊಡ್ಡ ‌ಅಲೆಯೊಂದು ಬಂದು ಮೂವರನ್ನು ಸೆಳೆದುಕೊಂಡಿದ್ದು, ಅವರಲ್ಲಿ ಇಬ್ಬರು ಯುವಕರನ್ನು ರಕ್ಷಿಸಲಾಗಿದೆ. ಅಬ್ರಾರ್ ಶೇಖ್ ಅಲೆಗಳ ನಡುವೆ ನಾಪತ್ತೆಯಾಗಿದ್ದಾನೆ.  ಅದೇ ರೀತಿ ಆಗೊಂಬೆಯ ಒಂದೇ ಕುಟುಂಬದ ಮೂವರು ಸಮುದ್ರದಲ್ಲಿ ಈಜಾಡುತ್ತಿದ್ದಾಗ ಸುಶಾಂತ್ ಮತ್ತು ಆತನ ಚಿಕ್ಕಪ್ಪ ಅಲೆಗಳ ಸೆಲೆತಕ್ಕೆ ಒಳಗಾಗಿದ್ದು, ಈ ಸಂದರ್ಭ ಸ್ಥಳೀಯ ಮೀನುಗಾರರು ಸುಶಾಂತ್ ನ ಚಿಕ್ಕಪ್ಪರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಸುಶಾಂತ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮುರುಡೇಶ್ವರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News