ಜೂ.13ರ ನಂತರ ಮುಂಗಾರು ಮಳೆ ನಿರೀಕ್ಷೆ; ರಾಜ್ಯ ಹವಾಮಾನ ಇಲಾಖೆ

Update: 2022-06-10 11:48 GMT

ಬೆಂಗಳೂರು, ಜೂ.10: ಮುಂಗಾರು ಮಳೆ ಕೃಷಿ ಆಧಾರಿತ ಆರ್ಥಿಕತೆಗೆ ಜೀವನಾಡಿಯಾಗಿದೆ. ಈ ಮಳೆಯು ಜೂ.13ರ ನಂತರ ಚುರುಕುಗೊಳ್ಳಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.     

ಮುಂಗಾರು ಮಾರುತಗಳು ರಾಜ್ಯವನ್ನು ಪ್ರವೇಶಿಸಿ ಒಂದು ವಾರ ಕಳೆದಿದೆ. ಈ ಅವಧಿಯಲ್ಲಿ ವಾಡಿಕೆಗಿಂತ ಶೇ.11ರಷ್ಟು ಮಳೆ ಕಡಿಮೆಯಾಗಿದೆ. ಜೂ.3ರಿಂದ 9ರ ವರೆಗಿನ ಅವಧಿಯಲ್ಲಿ ವಾಡಿಕೆಯಂತೆ 38 ಮಿ.ಮೀ. ಮಳೆಯಾಗಬೇಕಿತ್ತು. 34 ಮಿ.ಮೀ. ನಷ್ಟು ಮಳೆಯಾಗಿದೆ.

ಮುಂಗಾರು ಪ್ರವೇಶಿಸುವ ಸಂದರ್ಭದಲ್ಲಿ ಮಳೆ ಪ್ರಮಾಣ ಕಡಿಮೆ ಇದ್ದು, ಮುಂದಿನ ವಾರದಿಂದ ರಾಜ್ಯಾದ್ಯಂತ ಮುಂಗಾರು ಆವರಿಸಲಿದೆ. ಜೂ.13ರ ನಂತರ ಮುಂಗಾರು ಚುರುಕುಗೊಳ್ಳಲಿದೆ ಎಂದು ಹೇಳಲಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂ.11 ಮತ್ತು 12ರಂದು ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಜೂ.13ರ ನಂತರ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಧಿಕ ಮಳೆ ಸುರಿಯಲಿದೆ ಎಂದು ಹೇಳಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News