​ಉಡುಪಿ: ಶುಕ್ರವಾರ ಮೂವರಲ್ಲಿ ಸೋಂಕು ಪತ್ತೆ

Update: 2022-06-10 15:48 GMT

ಉಡುಪಿ : ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ ಮೂವರಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿರುವ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ೧೦ಕ್ಕೇರಿದೆ. 

ಇಂದು ನಾಲ್ವರು ಗುಣಮುಖರಾಗಿದ್ದು, ಇಂದಿನ ಮೂವರು ಸೇರಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಈಗ ೧೦ ಆಗಿದೆ. ದಿನದಲ್ಲಿ ಉಡುಪಿ ತಾಲೂಕಿನ ಇಬ್ಬರು ಹಾಗೂ ಕಾರ್ಕಳದ ಒಬ್ಬರು ಸೇರಿದಂತೆ ಒಟ್ಟು ಮೂವರು ಪುರುಷರು ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ.

ಜಿಲ್ಲೆಯಲ್ಲಿ ಇಂದು ಒಟ್ಟು ೨೬೫ ಮಂದಿಯನ್ನು ಕೋವಿಡ್ ಪರೀಕ್ಷೆ ಗೊಳಪಡಿಸಲಾಗಿದ್ದು, ಉಡುಪಿ ತಾಲೂಕಿನ ೧೯೩ ಮಂದಿಯಲ್ಲಿ ಇಬ್ಬರು ಪಾಸಿಟಿವ್ ಬಂದಿದ್ದರೆ ಕಾರ್ಕಳ ತಾಲೂಕಿನ ೩೦ ಮಂದಿಯಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಕುಂದಾಪುರ ತಾಲೂಕಿನ ೪೨ ಮಂದಿಯಲ್ಲಿ ಯಾರಲ್ಲೂ ಸೋಂಕು ಕಂಡುಬಂದಿಲ್ಲ. 

೩೯೮ ಮಕ್ಕಳಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು ೧೧೦೧ ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ ೩೯೮ ಮಂದಿ ೧೨ರಿಂದ ೧೪ ವರ್ಷದೊಳಗಿನ ಮಕ್ಕಳೂ ಸೇರಿದ್ದಾರೆ. ೧೧೬ ಮಕ್ಕಳಿಗೆ ಮೊದಲ ಡೋಸ್ ನೀಡಿದ್ದರೆ, ೨೮೨ ಮಂದಿ ಮಕ್ಕಳು ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯ ೩೩,೦೦೬ ಮಂದಿ ಮಕ್ಕಳು ಮೊದಲ ಡೋಸ್ ಹಾಗೂ ೨೫,೪೫೩ ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

೧೫ರಿಂದ ೧೮ ವರ್ಷದೊಳಗಿನ ೪೯,೧೪೬ ಮಂದಿ ಈಗಾಗಲೇ ಮೊದಲ ಡೋಸ್ ಪಡೆದಿದ್ದರೆ, ೪೭,೮೨೪ ಮಂದಿ ಎರಡನೇ ಡೋಸ್ ಲಸಿಕೆಯನ್ನು ತೆಗೆದುಕೊಂಡಿದ್ದಾರೆ. ೬೦ ವರ್ಷ ಮೇಲಿನ ೫೭,೭೪೧ ಮಂದಿ ಹಿರಿಯ ನಾಗರಿಕರ ಸಹ ಮುನ್ನೆಚ್ಚರಿಕೆ ಲಸಿಕೆಯನ್ನು ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News