ಫ್ಯಾಷನ್ ಡಿಸೈನರ್ ಪ್ರತ್ಯುಷಾ ಗರಿಮೆಲ್ಲಾ ಅನುಮಾನಾಸ್ಪದ ಸಾವು
Update: 2022-06-11 21:12 IST
ಹೈದರಾಬಾದ್: ಹೈದರಾಬಾದ್ ಮೂಲದ ಫ್ಯಾಷನ್ ಡಿಸೈನರ್ ಪ್ರತ್ಯುಷಾ ಗರಿಮೆಲ್ಲಾ ತೆಲಂಗಾಣದ ಬಂಜಾರಾ ಹಿಲ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು timesofindia ವರದಿ ಮಾಡಿದೆ.
ಆಕೆಯ ಮಲಗುವ ಕೋಣೆಯಲ್ಲಿ ಕಾರ್ಬನ್ ಮಾನಾಕ್ಸೈಡ್ ಸಿಲಿಂಡರ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದ ಸಾವಿನ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಎಎನ್‌ಐಗೆ ತಿಳಿಸಿದ್ದಾರೆ.
ಕಾರ್ಬನ್ ಮಾನಾಕ್ಸೈಡ್ ಸೇವಿಸಿರುವ ಶಂಕೆ ವ್ಯಕ್ತವಾಗಿದ್ದು, ವಿಷಾನಿಲ ಸೇವನೆಯೇ ಸಾವಿಗೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.