×
Ad

ಕಾಶ್ಮೀರ: ಪೊಲೀಸ್ ಹತ್ಯೆಯಲ್ಲಿ ಭಾಗಿಯಾಗಿರುವ ಓರ್ವ ಸೇರಿದಂತೆ ಮೂವರು ಲಷ್ಕರ್ ಉಗ್ರರು ಎನ್ ಕೌಂಟರ್ ಗೆ ಬಲಿ

Update: 2022-06-12 10:10 IST
ಸಾಂದರ್ಭಿಕ ಚಿತ್ರ, Photo:PTI

ಪುಲ್ವಾಮಾ,(ಜಮ್ಮು-ಕಾಶ್ಮೀರ): ಪುಲ್ವಾಮಾದ ದ್ರಾಬ್ಗಾಮ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಒಟ್ಟು ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ರವಿವಾರ ಮಾಹಿತಿ ನೀಡಿದ್ದಾರೆ.

"ಪುಲ್ವಾಮಾ ಎನ್‌ಕೌಂಟರ್ ಅಪ್‌ಡೇಟ್: ಇನ್ನೂ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ (ಒಟ್ಟು 3). ಗುರುತು ಹಾಗೂ  ಸಂಬಂಧವನ್ನು ಖಚಿತಪಡಿಸಲಾಗುತ್ತಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯ ನಡೆಯುತ್ತಿದೆ" ಎಂದು ಜಮ್ಮು-ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.

"ಮೂವರೂ ಕೊಲ್ಲಲ್ಪಟ್ಟಿದ್ದಾರೆ. ಭಯೋತ್ಪಾದಕರು ಸ್ಥಳೀಯರಾಗಿದ್ದು, ಭಯೋತ್ಪಾದಕ ಸಂಘಟನೆ ಎಲ್ಇಟಿ ಜೊತೆ ನಂಟು ಹೊಂದಿದ್ದಾರೆ. ಅವರಲ್ಲಿ ಒಬ್ಬನನ್ನು ಜುನೈದ್ ಶೀರ್ಗೋಜ್ರಿ ಎಂದು ಗುರುತಿಸಲಾಗಿದೆ.ಈತ  ಮೇ 13 ರಂದು ನಮ್ಮ ಸಹೋದ್ಯೋಗಿ ಹುತಾತ್ಮ ರಿಯಾಝ್ ಅಹ್ಮದ್ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ" ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ( ಐಜಿಪಿ ) ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News