×
Ad

ಸೋನಿಯಾ, ರಾಹುಲ್ ಗಾಂಧಿಗೆ ಈಡಿ ಸಮನ್ಸ್ ನೀಡಿರುವುದು ಬಿಜೆಪಿಯ ಕುತಂತ್ರದ ಭಾಗ: ದಿನೇಶ್ ಗುಂಡೂರಾವ್ ಟ್ವೀಟ್

Update: 2022-06-12 12:48 IST

ಬೆಂಗಳೂರು : ರಾಜಕೀಯ ಎದುರಾಳಿಗಳನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ,  ಈಡಿ ಮತ್ತು ಸಿಬಿಐ ನಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಈಡಿ ಸಮನ್ಸ್ ನೀಡಿರುವುದು ಬಿಜೆಪಿಯ ಕುತಂತ್ರದ ಭಾಗ. ಈಡಿ ಮತ್ತು ಸಿಬಿಐ ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು. ಆದರೆ ಈ ಸಂಸ್ಥೆಗಳು ಬಿಜೆಪಿಯ ಅಂಗ ಸಂಸ್ಥೆಯಾಗಿವೆ ಎಂದು ಕಾಂಗ್ರೆಸ್‌ ಮುಖಂಡ ದಿನೇಶ್ ಗುಂಡೂರಾವ್ ಟ್ವೀಟ್‌ ಮಾಡಿದ್ದಾರೆ.

ಮೋದಿಯವರು ಪ್ರಧಾನಿಯಾದ ಬಳಿಕ‌ ಕೇವಲ ವಿರೋಧ ಪಕ್ಷದವರನ್ನೇ ಗುರಿಯಾಗಿಸಿಕೊಂಡು ED,CBI ಮತ್ತು IT ದಾಳಿ ನಡೆದಿದೆ. ಆದರೆ BJPಯ ಒಬ್ಬರೇ ಒಬ್ಬರ ಮೇಲೆ ದಾಳಿ ನಡೆದಿಲ್ಲ. ಹಾಗಾದರೆ BJPಯವರೇನು ಸಚ್ಛಾರಿತ್ರ್ಯರೆ ? ಸದ್ಗುಣ ಸಂಪನ್ನರೆ ? EDಯವರ ಪ್ರಕಾರ ಆಪರೇಷನ್ ಕಮಲದಲ್ಲಿ ಕೈ ಬದಲಾದ ಸಾವಿರಾರು ಕೋಟಿ ಹಣ ಅಕ್ರಮ ಸಂಪತ್ತಲ್ಲವೆ? ಆಪರೇಷನ್ ಕಮಲಕ್ಕೆ ಹೂಡಿಕೆಯಾದ ಹಣದ ಮೂಲ ಯಾವುದು?

ಆಳುವ ಸರ್ಕಾರದ ಕೈಗೊಂಬೆಯಾಗಿ ದ್ವೇಷದ ಸಾಧನವಾಗಿರುವ ED ಸಾಂವಿಧಾನಿಕ ಸಂಸ್ಥೆ ಎಂದು ಕರೆಸಿಕೊಳ್ಳುವ ಅರ್ಹತೆಯೇ ಇಲ್ಲ. ಆಳುವ ಸರ್ಕಾರವೊಂದು‌ ಸಾಂವಿಧಾನಿಕ ಸಂಸ್ಥೆಗಳನ್ನು ಇಷ್ಟು ಕೀಳುಮಟ್ಟದಲ್ಲಿ ದುರುಪಯೋಗಿಸಿಕೊಂಡ‌ ಉದಾಹರಣೆ ಇತಿಹಾಸದಲ್ಲೇ ಇಲ್ಲ. ಬಿಜೆಪಿಯ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ. ಇದನ್ನು ಪ್ರಜ್ಞಾವಂತ ಸಮಾಜ ಖಂಡಿಸಬೇಕಿದೆ ಎಂದು ಟ್ವೀಟ್‌ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News