ಬೈಕ್‌ಗೆ ಪೆಟ್ರೋಲ್ ಹಾಕಿಸಿ ಹಣ ನೀಡದೆ ಮಾರಕಾಸ್ತ್ರಗಳಿಂದ ಹಲ್ಲೆ ಪ್ರಕರಣ: ಆರೋಪಿಗಳ ಬಂಧನ
Update: 2022-06-12 17:08 IST
ಬೆಂಗಳೂರು, ಜೂ. 12: ಬೈಕ್‍ಗೆ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಆರೋಪ ಪ್ರಕರಣ ಸಂಬಂಧ ಇಬ್ಬರನ್ನು ಬ್ಯಾಟರಾಯಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಉದಯ್, ಕಿರಣ್ ಬಂಧಿತ ಆರೋಪಿಗಳು ಎಂದು ಪೊಲೀಸರು ಹೇಳಿದ್ದಾರೆ. ಜೂನ್ 2ರ ರಾತ್ರಿ 9.30ರ ಸುಮಾರಿಗೆ ಬಂಕ್‍ನಲ್ಲಿ ಮಚ್ಚು ಬೀಸಿ ಪರಾರಿಯಾಗಿದ್ದರು. ನಯಾರ ಬಂಕ್‍ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಪರಾರಿಯಾಗಿದ್ದರು. ಬಂಕ್ ಸಿಬ್ಬಂದಿ ಮೇಲೆ ಮಚ್ಚು ಬೀಸಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಬಂಕ್ ಸಿಬ್ಬಂದಿ ನೀಡಿದ್ದ ದೂರಿನನ್ವಯ ಉದಯ್, ಕಿರಣ್‍ನನ್ನು ಬಂಧಿಸಲಾಗಿದೆ.
ಇನ್ನೂ, ಇದೇ ಪ್ರಕರಣ ಸಂಬಂಧ ನಾಪತ್ತೆಯಾಗಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದರು.