ಎಸ್ಸಿ-ಎಸ್ಟಿಗೆ ಹೆಚ್ಚುವರಿ ಮೀಸಲಾತಿ; ವರದಿ ಸಲ್ಲಿಸಲು ಸಮಯಾವಕಾಶ ಕೇಳಿದ ನ್ಯಾ.ಸುಭಾಷ್ ಅಡಿ ಸಮಿತಿ
Update: 2022-06-12 22:54 IST
ಬೆಂಗಳೂರು, ಜೂ.12: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹೆಚ್ಚುವರಿ ಯಾಗಿ ಮೀಸಲಾತಿ ಕಲ್ಪಿಸುವ ಸಂಬಂಧ ರಚನೆಯಾಗಿದ್ದ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿಯು ತನ್ನ ವರದಿಯನ್ನು ಅಂತಿಮಗೊಳಿಸಿದ್ದು, ವರದಿ ಸಲ್ಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಕಾಲಾವಕಾಶ ಕೋರಿದೆ ಎಂದು ಮೂಲಗಳು ತಿಳಿಸಿವೆ.
ಎಸ್ಸಿ, ಎಸ್ಟಿ ಸಮುದಾಯಗಳಿಗೆ ಹೆಚ್ಚುವರಿ ಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರಕಾರ ಕೆಲ ತಿಂಗಳ ಹಿಂದೆ ನ್ಯಾಯಮೂರ್ತಿ ಸುಭಾಷ ಅಡಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು.
ಈಗ ಆ ಸಮಿತಿ ಸಮಗ್ರವಾಗಿ ಅಧ್ಯಯನ ನಡೆಸಿ ಅಂತಿಮ ವರದಿಯನ್ನು ಸಿದ್ಧಪಡಿಸಿದೆ ಎಂದು ಮೂಲಗಳು ಖಚಿತಪಡಿಸಿವೆ. ಅಂತಿಮಗೊಂಡಿರುವ ಆ ವರದಿಯನ್ನು ಸರಕಾರಕ್ಕೆ ಮಂಡಿಸಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಸುಭಾಷ ಅಡಿ ಸಮಿತಿ ಸರಕಾರಕ್ಕೆ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಮೂಲಗಳು ಖಚಿತಪಡಿಸಿವೆ.