×
Ad

ಕೇಂದ್ರದಿಂದ ಎಲ್ಲ ವರ್ಗವನ್ನೂ ತಲುಪುವಂತಹ ಜನಪ್ರಿಯ ಯೋಜನೆ ಜಾರಿ - ಸುನೀಲ್‌ ಕುಮಾರ್‌

Update: 2022-06-13 11:23 IST

ಕಾರ್ಕಳ : ಮೋದಿ ಸರಕಾರ ಕಳೆದ 8 ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಆಡಳಿತ ನಡೆಸಿಕೊಂಡು ಬಂದಿದೆ. ಎಲ್ಲ ವರ್ಗವನ್ನೂ ತಲುಪುವಂತಹ ಜನಪ್ರಿಯ ಯೋಜನೆ ಜಾರಿಗೊಳಿಸಿದೆ ಎಂದು ಸಚಿವ ಸುನೀಲ್‌ ಕುಮಾರ್‌ ಹೇಳಿದರು. 

ಅವರು ವಿಕಾಸ ಕಚೇರಿಯಲ್ಲಿ ತಾಲೂಕು ಮಹಿಳಾ ಮೋರ್ಚಾ ವತಿಯಿಂದ ನಡೆದ ಫಲಾನುಭವಿಗಳ ಮಹಿಳಾ ಸಮಾವೇಶ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಉಜ್ವಲ, ಕೃಷಿ ಸಮ್ಮಾನ್‌, ಆಯುಷ್ಮಾನ್‌ ಭಾರತ್‌ ಹೀಗೆ ಹತ್ತಾರು ಜನೋಪಯೋಗಿ ಯೋಜನೆ ಮೂಲಕ ಕೇಂದ್ರದ ಮೋದಿ ಸರಕಾರ ಸರ್ವರ ಪ್ರಶಂಸೆಗೆ ಪಾತ್ರವಾಗಿದೆ ಎಂದರು.

ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಜಯರಾಂ ಸಾಲ್ಯಾನ್, ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್, ಯುವಮೋರ್ಚಾ ಜಿಲ್ಲಾಧ್ಯಕ್ಷ ವಿಖ್ಯಾತ್‌ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ರವಿಕಾಂತ್‌ ಪ್ರಾರ್ಥಿಸಿ, ಹೆಬ್ರಿ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷೆ ಲಕ್ಷ್ಮೀ ಕಿಣಿ  ಸ್ವಾಗತಿಸಿದರು. ಮರ್ಣೆ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಸುಷ್ಮಾ ತೆಂಡೂಲ್ಕರ್‌ ಕಾರ್ಯಕ್ರಮ ನಿರೂಪಿಸಿ, ಮಹಿಳಾ ಮೊರ್ಚಾ ಉಪಾಧ್ಯಕ್ಷೆ ಜ್ಯೋತಿ ರಮೇಶ್‌ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News