ಆದಿತ್ಯನಾಥ್ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಂತೆ ವರ್ತಿಸುತ್ತಿದ್ದಾರೆ: ಅಸದುದ್ದೀನ್ ಉವೈಸಿ
Update: 2022-06-13 11:46 IST
ಕಚ್(ಗುಜರಾತ್) : ಪ್ರಯಾಗ್‌ರಾಜ್ ಹಿಂಸಾಚಾರದ ಪ್ರಮುಖ ಆರೋಪಿಯ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ರವಿವಾರ ವಾಗ್ದಾಳಿ ನಡೆಸಿದರು. ಆದಿತ್ಯನಾಥ್ ಅವರು ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
"ಉತ್ತರಪ್ರದೇಶದ ಮುಖ್ಯಮಂತ್ರಿ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಅವರು ಯಾರನ್ನೂ ಬೇಕಾದರೂ ತಪ್ಪಿತಸ್ಥರು ಎಂದು ಘೋಷಿಸಿ ಅವರ ಮನೆಗಳನ್ನು ಧ್ವಂಸ ಮಾಡುತ್ತಾರೆ" ಎಂದು ಗುಜರಾತ್‌ನ ಕಚ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಉವೈಸಿ ಕೇಳಿದರು.
ಪ್ರಯಾಗ್‌ರಾಜ್‌ನಲ್ಲಿ ಜೂನ್ 10 ರಂದು ನಡೆದ ಹಿಂಸಾಚಾರದ ಸಂಚುಕೋರ ಎಂದು ಆರೋಪಿಸಲಾಗಿರುವ ಜಾವೇದ್ ಮುಹಮ್ಮದ್ ಅವರ ಮನೆಯನ್ನು ಭಾರೀ ಪೊಲೀಸ್ ನಿಯೋಜನೆಯ ನಡುವೆ ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರ (ಪಿಡಿಎ) ರವಿವಾರ ನೆಲಸಮಗೊಳಿಸಿದೆ.