×
Ad

''ಪಲಾಯನವಾದವೇ ಇವರ ಬಂಡವಾಳ'': ಪೊಲೀಸರಿಂದ ತಪ್ಪಿಸಿಕೊಳ್ಳುವ ಯುವ ಕಾಂಗ್ರೆಸ್ ಅಧ್ಯಕ್ಷರ ವಿಡಿಯೋ ಹಂಚಿಕೊಂಡ ಬಿಜೆಪಿ

Update: 2022-06-13 15:08 IST

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆ ನಡೆಸಲು ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ (ಈಡಿ)ಸಮನ್ಸ್ ನೀಡಿದ್ದನ್ನು ವಿರೋಧಿಸಿ ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.  ಇದೇ ವೇಳೆ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರ ವಿಡಿಯೋ ಒಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಬಿಜೆಪಿ, ತೀವ್ರ ತರಾಟೆಗೆ ತೆಗೆದುಕೊಂಡಿದೆ. 

ಬಿ.ವಿ.ಶ್ರೀನಿವಾಸ್ ಸುದ್ದಿ ಮಾಧ್ಯಮವೊಂದರ ಜೊತೆ ಮಾತನಾಡುವುದು, ಬಳಿಕ ಕಾರಿನಿಂದ ಇಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಯೊಬ್ಬರು ಕಾರಿನ ಸಮೀಪ ಬಂದಾಗ ಶ್ರೀನಿವಾಸ್ ಅವರು ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗುವುದು  ಬಿಜೆಪಿ ಕರ್ನಾಟಕ ತನ್ನ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕಾಣಿಸುತ್ತದೆ. 

''ಕಾಂಗ್ರೆಸಿಗರ ವೀರೋಚಿತ ಹೋರಾಟದ ಪರಿಯಿದು. ಈ.ಡಿ ವಿರುದ್ಧ ಪ್ರತಿಭಟನೆಯ ಪೋಸು ಕೊಡಲು ಬಂದ ಐವೈಸಿ ಅಧ್ಯಕ್ಷ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾಲಿಗೆ ಬುದ್ಧಿ ಹೇಳುತ್ತಿದ್ದಾರೆ. ಪಲಾಯನವಾದವೇ ಇವರ ಬಂಡವಾಳ!'' ಎಂದು ಲೇವಡಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News