KSRTC- ಮೇ ತಿಂಗಳಲ್ಲಿ ಟಿಕೆಟ್ ರಹಿತ ಪ್ರಯಾಣ; ಆರು ಲಕ್ಷ ರೂ.ಗಿಂತ ಅಧಿಕ ದಂಡ ವಸೂಲಿ
Update: 2022-06-13 20:27 IST
ಬೆಂಗಳೂರು, ಜೂ.13: ಮೇ ತಿಂಗಳಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯಗಳನ್ನು ಚುರುಕುಗೊಳಿಸಿ ಟಿಕೇಟ್ ರಹಿತ ಪ್ರಯಾಣಿಕರಿಂದ 6,31,767 ರೂ.ಗಳನ್ನು ಸಂಗ್ರಹಿಸಲಾಗಿದೆ.
ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 49,957 ವಾಹನಗಳನ್ನು ತನಿಖೆಗೊಳಪಡಿಸಿ 3,552 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 3,898 ಟಿಕೇಟ್‍ರಹಿತ ಪ್ರಾಯಾಣಿಕರಿಂದ 6,31,767 ರೂ.ಗಳನ್ನು ಸಂಗ್ರಹಿಸಲಾಗಿದೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 81,767 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಹಾಗೆಯೇ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ದಂಡದಿಂದ ತಪ್ಪಿಕೊಳ್ಳಲು ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್ ಅಥವಾ ಪಾಸ್ ಪಡೆದು ಪ್ರಯಾಣ ಮಾಡುವಂತೆ ನಿಗಮವು ತಿಳಿಸಿದೆ.