650 ಟೆಸ್ಟ್ ವಿಕೆಟ್ ಪೂರೈಸಿದ ಮೊದಲ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್

Update: 2022-06-13 15:26 GMT
PTI Photo

ಲಂಡನ್, ಜೂ.13: ಇಂಗ್ಲೆಂಡ್‌ನ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್‌ನಲ್ಲಿ 650 ವಿಕೆಟ್‌ಗಳನ್ನು ಪೂರೈಸಿದ್ದಾರೆ. ಈ ಮೈಲಿಗಲ್ಲು ತಲುಪಿದ ವಿಶ್ವದ ಮೊದಲ ವೇಗದ ಬೌಲರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ನ್ಯೂಝಿಲ್ಯಾಂಡ್ ವಿರುದ್ಧ ನಾಟಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಬ್ಯಾಟರ್ ಟಾಮ್ ಲಥಾಮ್‌ರನ್ನು ಎಲ್ಬಿಡಬ್ಲು ಬಲೆಗೆ ಬೀಳಿಸಿದ ಬಳಿಕ ಆ್ಯಂಡರ್ಸನ್ ಈ ಸಾಧನೆ ಮಾಡಿದರು.

ಆ್ಯಂಡರ್ಸನ್ 650 ಟೆಸ್ಟ್ ವಿಕೆಟ್ ಪಡೆದ ಇಂಗ್ಲೆಂಡ್‌ನ ಮೊದಲ ಬೌಲರ್ ಆಗಿದ್ದಾರೆ. ಸದ್ಯಕ್ಕೆ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್‌ ಪಟ್ಟಿಯಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್(800)ಹಾಗೂ ಆಸ್ಟ್ರೇಲಿಯದ ಸ್ಪಿನ್ ದಂತಕತೆ ಶೇನ್ ವಾರ್ನ್ (708)ಬಳಿಕ 3ನೇ ಸ್ಥಾನದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News