ಕೇರಳ ಸಿಎಂ ಪಿಣರಾಯಿ ವಿಜಯನ್‌ ಪ್ರಯಾಣಿಸುತ್ತಿದ್ದ ವಿಮಾನದಲ್ಲೇ ಪ್ರತಿಭಟಿಸಿದ ಕಾಂಗ್ರೆಸ್‌ ಕಾರ್ಯಕರ್ತರು

Update: 2022-06-13 17:09 GMT
Photo: Twitter/SS

ಕೊಚ್ಚಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ಕಣ್ಣೂರಿನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದ ವಿಮಾನದೊಳಗೆ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರು ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಶಬರಿನಾಥನ್ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋವನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಪಕ್ಷದ ಇಬ್ಬರು ಕಾರ್ಯಕರ್ತರು ಮುಖ್ಯಮಂತ್ರಿ ವಿಜಯನ್ ರಾಜೀನಾಮೆ ಕೋರಿ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ. ಮುಖ್ಯಮಂತ್ರಿ ಜೊತೆಗಿದ್ದ ವ್ಯಕ್ತಿ ಕಾಂಗ್ರೆಸ್‌ ಕಾರ್ಯಕರ್ತರನ್ನು ತಳ್ಳಿ ಹಾಕಿರುವುದು ಕೂಡಾ ವಿಡಿಯೋದಲ್ಲಿ ದಾಖಲಾಗಿದೆ.

ಪ್ರತಿಭಟನಾನಿರತ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ತಳ್ಳಿದವರು ಹಿರಿಯ ಸಿಪಿಐ(ಎಂ) ನಾಯಕ ಮತ್ತು ಎಲ್‌ಡಿಎಫ್ ಸಂಚಾಲಕ ಇ ಪಿ ಜಯರಾಜನ್ ಎಂದು ಶಬರಿನಾಥನ್ ಆರೋಪಿಸಿದ್ದಾರೆ.

ಈ ನಡುವೆ, ಯೂತ್ ಕಾಂಗ್ರೆಸ್ ಕಾರ್ಯಕರ್ತರು ವಿಮಾನದೊಳಗೆ ಮುಖ್ಯಮಂತ್ರಿ ವಿಜಯನ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಪಿಐ(ಎಂ) ಮುಖಂಡರೊಬ್ಬರು ಆರೋಪಿಸಿದ್ದಾರೆ.

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುವಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News