×
Ad

ಬೆಂಗಳೂರು: ಕೆರೆಯಲ್ಲಿ ತೇಲಿ ಬಂದ ಸೂಟ್‍ಕೇಸ್‍ನಲ್ಲಿ ಮಹಿಳೆಯ ಮೃತದೇಹ ಪತ್ತೆ

Update: 2022-06-14 18:59 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.14: ನಗರದ ಹೊರವಲಯದ ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸೂಟ್‍ಕೇಸ್ ಒಂದು ತೇಲಿ ಬಂದಿದ್ದು, ಅದರಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ.

ಇಲ್ಲಿನ ಹೊನ್ನೇನಹಳ್ಳಿಯ ಕೆರೆಯಲ್ಲಿ ಸೂಟ್‍ಕೇಸ್ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪರಿಶೀಲನೆ ನಡೆಸಿದಾಗ ಸೂಟ್‍ಕೇಸ್‍ನಲ್ಲಿ ಅಪರಿಚಿತ ಮಹಿಳೆ ಮೃತದೇಹ ಪತ್ತೆಯಾಗಿದೆ.

ಈ ಮೃತದೇಹವು ಸುಮಾರು 23 ರಿಂದ 30 ವರ್ಷ ವಯಸ್ಸಿನ ಮಹಿಳೆಯದಾಗಿರಬಹುದು ಎಂದು ಅಂದಾಜಿಸಲಾಗಿದೆ. ಬೇರೆಡೆ ಕೊಲೆ ಮಾಡಿ ಶವ ತಂದು ಕೆರೆಗೆ ಎಸೆದಿರುವ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News