×
Ad

​ಜೂ.15ರಿಂದ ಎಂಡೋ ಸಂತ್ರಸ್ತರಿಗೆ ಆರೋಗ್ಯ ಶಿಬಿರ

Update: 2022-06-14 21:03 IST

ಮಂಗಳೂರು: ಜಿಲ್ಲೆಯಲ್ಲಿ ಎಂಡೋ ಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.

ಜೂ.೧೫ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ, ಜೂ.೧೮ರಂದು ಪುತ್ತೂರುತಾಲೂಕಿನ ಪಾಣಾಜೆ, ಜೂ.೨೧ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ ಮತ್ತು ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News