ಎರಡನೇ ದಿನದ ಈಡಿ ವಿಚಾರಣೆ ಮುಕ್ತಾಯ: ನಾಳೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ರಾಹುಲ್‌ ಗಾಂಧಿಗೆ ಸಮನ್ಸ್‌

Update: 2022-06-14 16:27 GMT
Photo: twitter/Supriya23b

ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ಎರಡನೇ ದಿನವೂ ವಿಚಾರಣೆ ನಡೆಸುತ್ತಿದೆ.  

ಎರಡನೇ ದಿನ ಸುಮಾರು 10 ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ನಡೆಸಲಾಗಿದೆ. ಅಲ್ಲದೆ, ನಾಳೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿದೆ ಎಂದು ndtv ವರದಿ ಮಾಡಿದೆ. 

ವಿಚಾರಣೆಯ 2 ನೇ ದಿನದಂದು, ಗಾಂಧಿಯವರು ತಮ್ಮ "Z+" ಶ್ರೇಣಿಯ ಭದ್ರತೆಯೊಂದಿಗೆ 11:30 ಕ್ಕೆ ಈ. ಡಿ ಸಂಸ್ಥೆಯ ಕಚೇರಿಗೆ ಆಗಮಿಸಿದ್ದರು. ವಿಚಾರಣೆಯ ಮೊದಲ ದಿನದಲ್ಲೂ ರಾಹುಲ್ ಗಾಂಧಿ ಅವರನ್ನು 10 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಮೂಲಗಳ ಪ್ರಕಾರ ಗಾಂಧಿಗೆ ನಿನ್ನೆ ಸುಮಾರು 25 ಪ್ರಶ್ನೆಗಳನ್ನು ಕೇಳಲಾಗಿದೆ. 

ಎರಡನೇ ದಿನ ತನ್ನ ಸಹೋದರಿ ಪ್ರಿಯಾಂಕ ಗಾಂಧಿ ವಾದ್ರಾ ಅವರೊಂದಿಗೆ ರಾಹುಲ್‌ ಗಾಂಧಿ ವಿಚಾರಣೆಗೆ ಹಾಜರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News