ರಾಷ್ಟ್ರಪತಿ ರಾಮನಾಥ್ ಕೋವಿಂದ್‍ಗೆ ಆತ್ಮೀಯ ಬೀಳ್ಕೊಡುಗೆ

Update: 2022-06-14 18:32 GMT

ಬೆಂಗಳೂರು, ಜೂ. 14: ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಥಮ ಪ್ರಜೆ ಸವಿತಾ ಕೊವಿಂದ್ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ನಗರದ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಗೋವಾ ರಾಜ್ಯಕ್ಕೆ ಪ್ರಯಾಣ ಕೈಗೊಂಡಿದ್ದು, ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಬೀಳ್ಕೋಟ್ಟರು.

ಈ ಸಂದರ್ಭದಲ್ಲಿ ಏರ್ ಮಾರ್ಷಲ್ ಮನವೇಂದ್ರ ಸಿಂಗ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಕಾರ್ಯದರ್ಶಿ ಹೇಮಲತಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಹಾಗೂ ಇತರ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News