ಪಶ್ಚಿಮ ಶಿಕ್ಷಕರ ಕ್ಷೇತ್ರ; ಸತತ 8ನೇ ಬಾರಿಗೆ ಗೆಲುವು ಸಾಧಿಸಿದ ಬಸವರಾಜ ಹೊರಟ್ಟಿ

Update: 2022-06-15 11:15 GMT

ಬೆಳಗಾವಿ:  ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಜೂ.13ರಂದು ನಡೆದಿದ್ದ ಚುನಾವಣೆಯ ಪಶ್ಚಿಮ ಶಿಕ್ಷಕರ ಕ್ಷೇತ್ರದ  ಮತ ಎಣಿಕೆ ಕಾರ್ಯವು ಪೂರ್ಣಗೊಂಡಿದ್ದು, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. 

ಬೆಳಗಾವಿ ನಗರದ ಜ್ಯೋತಿ ಕಾಲೇಜಿನಲ್ಲಿ ನಡೆದ ಮತ ಎಣಿಕೆ ಪ್ರಕ್ರಿಯೆ ಬಳಿಕ ಬೆಳಗಾವಿ, ಧಾರವಾಡ, ಹಾವೇರಿ, ಗದಗ 4 ಜಿಲ್ಲೆಗಳನ್ನು ಒಳಗೊಂಡಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 11,000ನಲ್ಲಿ 7070 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ. 

ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರಗೆ 3314 ಮತಗಳು ಬಂದಿದೆ. 

ಇಲ್ಲಿನ ಮತ ಎಣಿಕೆ ಕೇಂದ್ರದಲ್ಲಿ ವಾಯವ್ಯ ಶಿಕ್ಷಕರು, ಪದವೀಧರ  ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫಲಿತಾಂಶದ  ಅಧಿಕೃತ ಘೋಷಣೆ ಬಾಕಿ ಇದೆ. 

ಮತ ಎಣಿಕಾ ಕೇಂದ್ರ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಶಿಕ್ಷಕರು ನನ್ನ ಕೈ ಬಿಟ್ಟಿಲ್ಲ. ನನ್ನ ಮೇಲೆ ಅವರು ಇಟ್ಟಿರುವ ವಿಶ್ವಾಸ ಉಳಿಸಿಕೊಂಡು ಬಂದಿದ್ದೇನೆ.  ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಇತ್ತು. ಶಿಕ್ಷಕರ ಬೇಡಿಕೆ ಈಡೇರಿಕೆಗೆ ನಾನು ಸದಾ ಬದ್ಧ' ಎಂದು ತಿಳಿಸಿದರು. 

ಇದನ್ನೂ ಓದಿ:  ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ; ಗೊಂದಲ ಮೂಡಿಸಿದ 2 ಹೆಚ್ಚುವರಿ ಮತಗಳು

ಇದನ್ನೂ ಓದಿಅದೃಷ್ಟದ ಅಂಬಾಸಿಡರ್ ಕಾರಿನಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿ  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News