ಚಾಮರಾಜನಗರ: ಕಾಡಾನೆ ದಾಳಿಗೆ ರೈತ ಬಲಿ
Update: 2022-06-16 07:49 IST
ಚಾಮರಾಜನಗರ: ಕಾಡಾನೆ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕೆಬ್ಬೇಪುರ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಬಂಡೀಪುರ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆ ಉಪಟಳ ತೀವ್ರವಾಗಿದ್ದು, ಮುಂಜಾನೆ 2:30ರ ಸಮಯದಲ್ಲಿ ಕಾಡಾನೆ ದಾಳಿಗೆ ಶಿವಪುರದ ರೈತ ಬೆಳ್ಳಶೆಟ್ಟಿ (65) ಎಂಬವರು ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಫಸಲು ಕಾಯುತ್ತಿದ್ದ ಸಂದರ್ಭ ತಂದೆ, ಮಗನ ಮೇಲೆ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಜಿ.ಎಸ್ ಬೆಟ್ಟ ವಲಯ ಅರಣ್ಯಾಧಿಕಾರಿ ನವೀನ್ ಕುಮಾರ್ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಳೆದ ವಾರ ರೈತರು ಆನೆ ಉಪಟಳದಿಂದ ಬೇಸತ್ತು ಅರಣ್ಯ ಅಧಿಕಾರಿಗಳ ವಿರುದ್ದ ಪ್ರತಿಭಟನೆ ನಡೆಸಿದ್ದರು.