ವಾಯವ್ಯ ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿಗೆ ಗೆಲುವು

Update: 2022-06-16 04:47 GMT
ಹಣಮಂತ ನಿರಾಣಿ

ಬೆಳಗಾವಿ:  ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಜೂ.13ರಂದು ನಡೆದಿದ್ದ ಚುನಾವಣೆಯ ವಾಯವ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಕಾರ್ಯವು ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ 34,693 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 

ತಡರಾತ್ರಿ ವೇಳೆ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು,  ಒಟ್ಟು 65,992 ಮತಗಳ ಪೈಕಿ 9,006 ಮತಗಳು ಅಸಿಂಧುವಾಗಿವೆ.

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಕಿರಿಯ ಸಹೋದರ ಆಗಿರುವ ಹಣಮಂತ ನಿರಾಣಿ, ಈ ಹಿಂದೆಯೂ ಪದವೀಧರ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 

ನಿರಾಣಿ ಅವರಿಗೆ 44.815 ಮತ ಬಂದರೆ, ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್ ಸಂಕ 10,122 ಮತ ಗಳಿಸಿದ್ದಾರೆ. 

ದಕ್ಷಿಣ ಪದವೀಧರರ ಕ್ಷೇತ್ರದ ಮತ ಎಣಿಕೆ: ವಿಧಾನ ಪರಿಷತ್ ನ ದಕ್ಷಿಣ ಪದವೀಧರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು,  ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡ ಈ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಗುರುವಾರವೂ ಮುಂದುವರಿದಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಧು.ಜಿ ಮಾದೇಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ. 

ನಗರದ ಮೈಸೂರು-ಹುಣಸೂರು ರಸ್ತೆಯ ಪಡುವಾರಹಳ್ಳಿಯಲ್ಲಿರುವ ಮಹರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಮುಂದುವರಿದಿದೆ. 

ಸಿಎಂ ಬೊಮ್ಮಾಯಿ ಅಭಿನಂದನೆ:   ವಿಧಾನಪರಿಷತ್ ಚುನಾವಣೆಯ ವಾಯುವ್ಯ ಪದವೀಧರ ಕ್ಷೇತ್ರದಿಂದ ಎರಡನೇ ಬಾರಿ ವಿಜಯ ಸಾಧಿಸಿದ ಹಣಮಂತ ನಿರಾಣಿ ಅವರಿಗೆ ಹಾರ್ದಿಕ ಅಭಿನಂದನೆಗಳು. ಈ ಗೆಲುವಿಗೆ ಕಾರಣೀಭೂತರಾದ ಕ್ಷೇತ್ರದ ಪ್ರಬುದ್ಧ ಪದವೀಧರ ಮತದಾರರು ಮತ್ತು ಹಗಲಿರುಳು ಶ್ರಮಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಮುಖರಿಗೆ ಧನ್ಯವಾದಗಳು ಎಂದು  ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ... ವಾಯುವ್ಯ ಶಿಕ್ಷಕರ ಕ್ಷೇತ್ರ; ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಜಯಭೇರಿ

ಇದನ್ನೂ ಓದಿ... ಪಶ್ಚಿಮ ಶಿಕ್ಷಕರ ಕ್ಷೇತ್ರ; ಸತತ 8ನೇ ಬಾರಿಗೆ ಗೆಲುವು ಸಾಧಿಸಿದ ಬಸವರಾಜ ಹೊರಟ್ಟಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News