ರಾಜ್ಯದಲ್ಲಿ ಕೋವಿಡ್ ಹೆಚ್ಚಾದರೆ ಕಾಂಗ್ರೆಸ್ ಹೊಣೆ: ಸಚಿವ ಸುಧಾಕರ್
ಬೆಂಗಳೂರು: ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಸಾಂವಿಧಾನಿಕ ಸಂಸ್ಥೆಗಳು ಹಾಗೂ ಪೋಲಿಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ದ್ವೇಷ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿ ಇಂದು (ಗುರುವಾರ) ಕಾಂಗ್ರೆಸ್ ರಾಜಭವನ ಮುತ್ತಿಗೆ ಚಳುವಳಿ ಹಮ್ಮಿಕೊಂಡಿದ್ದು, ಈ ಕುರಿತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 'ರಾಜ್ಯದಲ್ಲಿ ಕೋವಿಡ್ ಹೆಚ್ಚಾದರೆ ಕಾಂಗ್ರೆಸ್ ಅವರೇ ಹೊಣೆ' ಎಂದು ಹೇಳಿದ್ದಾರೆ.
'ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಆದರೆ ಕಾಂಗ್ರೆಸ್ ನವರೇ ನೈತಿಕ ಹೊಣೆ ಹೊರಬೇಕು. ಅವರು ಪ್ರತಿಭಟನೆ ಮಾಡುವುದಾದರೆ ಫ್ರೀಡಂ ಪಾರ್ಕ್ ನಲ್ಲಿ ಮಾಡಲಿ. ಈ ಸಂಬಂಧ ಹೈಕೋರ್ಟ್ ಆದೇಶವೂ ಇದೆ. ಆದರೆ ಅದರ ಹೊರತಾಗಿಯೂ ಜನರನ್ನು ಸೇರಿಸಿಕೊಂಡು ರಸ್ತೆಯಲ್ಲಿ ಪ್ರತಿಭಟನೆ ಮಾಡೋದು ಸರಿಯಲ್ಲ' ಎಂದು ಹೇಳಿದ್ದಾರೆ.
'ಇವತ್ತಿನ ಪ್ರತಿಭಟನೆ ಕೊವೀಡ್ ಉಲ್ಲಂಘನೆ ಅಡಿ ಕೇಸ್ ದಾಖಲಿಸುವ ವಿಚಾರದಲ್ಲಿ ಸಂಬಂಧ ಮುಖ್ಯಮಂತ್ರಿ ಗಳ ಜೊತೆ ಮಾತಾಡ್ತೇನೆ' ಎಂದು ಸುಧಾಕರ್ ತಿಳಿಸಿದರು.