×
Ad

ಕೇಂದ್ರದ 'ಅಗ್ನಿಪಥ' ಯೋಜನೆ ವಿರುದ್ಧ ಬಿಹಾರದಲ್ಲಿ ಹಿಂಸಾತ್ಮಕ ಪ್ರತಿಭಟನೆ, ಅಶ್ರುವಾಯು ಪ್ರಯೋಗ

Update: 2022-06-16 12:13 IST
Photo:PTI

ಪಾಟ್ನಾ: ಸೇನಾ ಆಕಾಂಕ್ಷಿಗಳು ಸತತ ಎರಡನೇ ದಿನವೂ ಬಿಹಾರದ ಹಲವು ಭಾಗಗಳಲ್ಲಿ ರೈಲು ಹಾಗೂ  ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ಸಶಸ್ತ್ರ ಪಡೆಗಳ ಆಮೂಲಾಗ್ರ ನೇಮಕಾತಿ ಯೋಜನೆಯಾದ ಅಗ್ನಿಪಥ್ ವಿರುದ್ಧದ ಪ್ರತಿಭಟನೆಗಳು ಗುರುವಾರ ಹಿಂಸಾಚಾರಕ್ಕೆ ತಿರುಗಿವೆ.

ಲಾಠಿ ಹಿಡಿದ ಪ್ರತಿಭಟನಾಕಾರರು ಭಭುವಾ ರೋಡ್ ರೈಲು ನಿಲ್ದಾಣದಲ್ಲಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಗಾಜುಗಳನ್ನು ಒಡೆದು ಒಂದು ಕೋಚ್‌ಗೆ ಬೆಂಕಿ ಹಚ್ಚಿದರು. ಭಾರತೀಯ ಸೇನಾ ಪ್ರೇಮಿಗಳು ಎಂಬ ಬ್ಯಾನರ್ ಹಿಡಿದುಕೊಂಡು ಹೊಸ ನೇಮಕಾತಿ ಯೋಜನೆಯನ್ನು ತಿರಸ್ಕರಿಸಿ ಘೋಷಣೆಗಳನ್ನು ಕೂಗಿದರು.

ಅರ್ರಾದಲ್ಲಿನ ರೈಲು ನಿಲ್ದಾಣದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರ ಬೃಹತ್ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಅನ್ನು ಆಶ್ರಯಿಸಬೇಕಾಯಿತು. ಪ್ರತಿಭಟನಾಕಾರರು ಹಳಿಗಳ ಮೇಲೆ ಪೀಠೋಪಕರಣಗಳನ್ನು ಎಸೆದು ಬೆಂಕಿ ಹಚ್ಚಿದ್ದರಿಂದ ಉಂಟಾದ ಬೆಂಕಿಯನ್ನು ನಂದಿಸಲು ರೈಲ್ವೆ ಸಿಬ್ಬಂದಿ ಅಗ್ನಿಶಾಮಕಗಳನ್ನು ಬಳಸುತ್ತಿರುವ ದೃಶ್ಯ ಕಂಡುಬಂದಿದೆ. 

ಜೆಹಾನಾಬಾದ್‌ನಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದು ರೈಲು ಸಂಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದ ವಿದ್ಯಾರ್ಥಿಗಳನ್ನು ರೈಲ್ವೆ ಹಳಿಯಿಂದ  ತೆರವುಗೊಳಿಸಲು ಯತ್ನಿಸಿದಾಗ  ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News