×
Ad

ಪ್ರತಿಭಟನೆ ವೇಳೆ ಪೊಲೀಸ್‌ ಸಿಬ್ಬಂದಿ ಕಾಲರ್‌ ಹಿಡಿದ ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ ವಿರುದ್ಧ ಪ್ರಕರಣ ದಾಖಲು

Update: 2022-06-16 18:32 IST

ಹೈದರಾಬಾದ್: ಪ್ರತಿಭಟನೆ ವೇಳೆ ಪೊಲೀಸರ ಕೊರಳಪಟ್ಟಿ ಹಿಡಿದಿದ್ದಕ್ಕಾಗಿ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಂಸದೆ ರೇಣುಕಾ ಚೌಧರಿ ವಿರುದ್ಧ ಪ್ರಕರಣ ದಾಖಲಾಗಿದೆ. ಆಕೆಯ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 353 ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್‌ನ ವಿರುದ್ಧ ತೆಲಂಗಾಣದಲ್ಲಿ ಪಕ್ಷ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಚೌಧರಿ ಅವರು ಪೊಲೀಸರ ಕಾಲರ್ ಅನ್ನು ಹಿಡಿದಿರುವುದನ್ನು ತೋರಿಸುವ ವಿಡಿಯೋ ಇಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

43 ಸೆಕೆಂಡ್‌ಗಳ ವಿಡಿಯೋದಲ್ಲಿ ಚೌಧರಿ ಅವರು ಪೊಲೀಸರೊಂದಿಗೆ ವಾಗ್ವಾದ ಮಾಡುವುದು ಕೂಡಾ ಕಂಡು ಬಂದಿದೆ. ಬಳಿಕ ಅವರನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ಪೊಲೀಸ್ ವ್ಯಾನ್ ಕಡೆಗೆ ಎಳೆದೊಯ್ದಿದ್ದಾರೆ.

ರಾಹುಲ್ ಗಾಂಧಿ ಅವರಿಗೆ ಇಡಿ ಸಮನ್ಸ್‌ ನೀಡುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ನೀಡಿದ “ರಾಜಭವನ ಚಲೋ” ಕರೆಯ ಭಾಗವಾಗಿ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ನ್ಯಾಷನಲ್ ಹೆರಾಲ್ಡ್-ಎಜೆಎಲ್ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ರಾಹುಲ್ ಅವರನ್ನು ವಿಚಾರಣೆ ನಡೆಸುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News