×
Ad

ದುಬೈ: ಡಾ.ಎಂ.ಎನ್.ರಾಜೇಂದ್ರ ಕುಮಾರ್‌ಗೆ ಮೈಲ್‌ಸ್ಟೋನ್ ಗ್ಲೋಬಲ್ ಅವಾರ್ಡ್ ಪ್ರದಾನ

Update: 2022-06-16 19:25 IST

ಮಂಗಳೂರು: ಮೈಲ್‌ಸ್ಟೋನ್ ಗ್ಲೋಬಲ್ ಅಚೀವರ್ಸ್ ಫೋರಮ್ ಲಖನೌ ನೀಡಿದ ಇಂಟರ್‌ನ್ಯಾಶನಲ್ ವರ್ಲ್ಡ್  ಮೈಲ್‌ಸ್ಟೋನ್ ಗ್ಲೋಬಲ್ ಅವಾರ್ಡ್‌ನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಬುಧವಾರ ದುಬೈಯಲ್ಲಿ ಸ್ವೀಕರಿಸಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮೈಲ್ ಸ್ಟೋನ್ ಗ್ಲೋಬಲ್ ಅಚೀವರ್ಸ್ ಸಂಸ್ಥೆ ನೀಡುತ್ತಿದೆ. ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾರ್ಥಕ ಸೇವೆಯ ಜೊತೆಗೆ ಅದ್ಭುತ ಸಾಧನೆಗೈದಿರುವ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಮೈಲ್ ಸ್ಟೋನ್ ಗ್ಲೋಬಲ್ ಅವಾರ್ಡ್‌ನ್ನು ಪ್ರಿನ್ಸ್ ಸುಹೇಲ್ ಮೊಹಮ್ಮದ್ ಅಲ್ ಝರೂನಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಮೈಲ್‌ಸ್ಟೋನ್ ಗ್ಲೋಬಲ್ ಅಚೀವರ್ಸ್ ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಮಲಿಕ್, ನವದೆಹಲಿಯ ಅರ್ಥಶಾಸ್ತ್ರಜ್ಞ ರಾಜೇಂದ್ರ ಕುಮಾರ್ ರಾಜ್,  ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೋಟ್ಟು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ, ಹಾಗೂ ಜಯಪ್ರಕಾಶ್ ತುಂಬೆ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News