×
Ad

ವಿದ್ಯಾರ್ಥಿ ವೇತನ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

Update: 2022-06-16 19:33 IST

ಮಂಗಳೂರು : ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ) ವಿದ್ಯಾರ್ಥಿಗಳಿಂದ ೨೦೨೧-೨೨ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಅನ್‌ಲೈನ್ ಮೂಲಕ ಸಲ್ಲಿಸುವ ಅರ್ಜಿಯ ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ.

NSPಯಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು SSP ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ ಅಥವಾ ಸಹಾಯವಾಣಿ ಸಂಖ್ಯೆ ೮೨೭೭೭೯೯೯೯೦ಗೆ ಅಥವಾ ತಾಲೂಕು ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ದ.ಕ.ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News