×
Ad

ಬ್ರಹ್ಮಾವರ: ಕೋಟ್ಪಾ ಕಾಯ್ದೆಯಡಿ 44 ಪ್ರಕರಣ ದಾಖಲು

Update: 2022-06-16 21:08 IST

ಉಡುಪಿ : ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಬ್ರಹ್ಮಾವರ ತಾಲೂಕಿನ ಬಾರ್ಕೂರು ಹಾಗೂ ಕಾಲೇಜಿನ ಸುತ್ತಮುತ್ತ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಒಟ್ಟು ೪೪  ಪ್ರಕರಣಗಳನ್ನು ದಾಖಲಿಸಿ, ೫೭೫೦ ರೂ. ದಂಡ ವಸೂಲಿ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಗದೀಶ್ ರಾವ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಟಿಪಿಇಓ ಗೋಪಾಲ  ಶೆಟ್ಟಿ, ಬ್ರಹ್ಮಾವರ ಪೊಲೀಸ್ ಠಾಣೆಯ ಎಎಸ್‌ಐ ಬಿ.ಕೆ  ಶಾಂತರಾಜ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News