ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ; ಡಿಕೆಶಿ ಸೇರಿ ಆರು ಮಂದಿಗೆ ಕೋರ್ಟ್ ನಿಂದ ಜಾಮೀನು ಮಂಜೂರು

Update: 2022-06-16 17:29 GMT

ಬೆಂಗಳೂರು, ಜೂ.16: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ನಡೆಸಿದ್ದ ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಆರು ಮಂದಿಗೆ ನಗರದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 

ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೇರಿ ಕಾಂಗ್ರೆಸ್ ನ 40 ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. 

ಪ್ರಕರಣದ ಆರೋಪಿಗಳಾದ ಡಿ.ಕೆ.ಶಿವಕುಮಾರ್, ಸಲೀಂ ಅಹ್ಮದ್, ಎಚ್.ಆಂಜನೇಯ, ಪರಮೇಶ್ವರ್ ನಾಯಕ್, ಕೆ.ರಾಜು ಮತ್ತು ಪಾರ್ವತಮ್ಮ ಅವರು ಕೋರ್ಟ್ಗೆ ಹಾಜರಾಗಿರುವುದನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News