ಆಸ್ಪತ್ರೆಯಲ್ಲಿರುವ ತಾಯಿಯೊಂದಿಗೆ ಸಮಯ ಕಳೆಯಲು ವಿರಾಮ: ರಾಹುಲ್ ಗಾಂಧಿ ವಿಚಾರಣೆಯನ್ನು ಮುಂದೂಡಿದ ಇಡಿ

Update: 2022-06-16 18:02 GMT
Photo: twitter/kparveen2005

ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಮುಂದಿನ ಸೋಮವಾರ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಲಿದೆ ಎಂದು ndtv ವರದಿ ಮಾಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿತ್ತು. ಆದರೆ ಈ ವಿಚಾರಣೆಯನ್ನು ಮುಂದೂಡುವಂತೆ ರಾಹುಲ್ ಗಾಂಧಿ ಮನವಿ ಮಾಡಿಕೊಂಡಿದ್ದರು.

ಕಳೆದ ಮೂರು ದಿನಗಳಿಂದ 30 ಗಂಟೆಗೂ ಹೆಚ್ಚು ಕಾಲ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಲಾಗಿದೆ. ದಿಲ್ಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿರುವ ಅವರ ತಾಯಿ ಸೋನಿಯಾ ಗಾಂಧಿ ಅವರೊಡನೆ ಸಮಯ ಕಳೆಯಲು ಅವರು ಕೋರಿದ ಹಿನ್ನೆಲೆಯಲ್ಲಿ ಅವರಿಗೆ ಇಂದು ವಿರಾಮ ನೀಡಲಾಯಿತು ಎಂದು ndtv ವರದಿ ಹೇಳಿದೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಇಬ್ಬರೂ ಸೋನಿಯಾ ಗಾಂಧಿಯವರೊಂದಿಗೆ ಆಸ್ಪತ್ರೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೋವಿಡ್-ಸಂಬಂಧಿತ ತೊಡಕುಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್‌ 2 ರಂದು ಸೋನಿಯಾ ಗಾಂಧಿ ಅವರಿಗೆ ಕೋವಿಡ್‌ ಪಾಸಿಟಿವ್‌ ವರದಿಯಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News