×
Ad

21 ಅಧಿಕಾರಿಗಳ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

Update: 2022-06-17 08:36 IST

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ರಾಜ್ಯದ 21 ಅಧಿಕಾರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ.

ಶುಕ್ರವಾರ ಬೆಳಗ್ಗೆ ದಾಳಿ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶೋಧ ನಡೆಸುತ್ತಿದೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ 21 ಅಧಿಕಾರಿಗಳ ವಿರುದ್ಧ ಮೊಕದ್ದಮೆ ದಾಖಲಿಸಿದ್ದು, ಆರೋಪಿತರ ಮನೆ, ಕಚೇರಿಗಳು, ಸಂಬಂಧಿಕರು ಮತ್ತು ನಿಕಟವರ್ತಿಗಳ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ.

ಎಸಿಬಿ ಸಂಸ್ಥೆಯ 300ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಗೊಳಗಾದ ಅಧಿಕಾರಿಗಳ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News