'ಅಗ್ನಿಪಥ್' ವಿರುದ್ಧ ಪ್ರತಿಭಟನೆ: ತೆಲಂಗಾಣದಲ್ಲಿ ಓರ್ವ ಮೃತ್ಯು, 15ಕ್ಕೂ ಹೆಚ್ಚು ಮಂದಿಗೆ ಗಾಯ

Update: 2022-06-17 13:12 GMT
Photo: PTI

ಸಿಕಂದರಾಬಾದ್: ಹೊಸ ಸೇನಾ ನೇಮಕಾತಿ ನೀತಿ 'ಅಗ್ನಿಪಥ್'  ವಿರುದ್ಧ ಪ್ರತಿಭಟನೆಯ ಕಿಚ್ಚು  ಬಿಹಾರ, ಉತ್ತರ ಪ್ರದೇಶ  ಹಾಗೂ  ಹರ್ಯಾಣದಲ್ಲಿ ಸತತ ಮೂರನೇ ದಿನಕ್ಕೆ ಕಾಲಿಟ್ಟ ಬಳಿಕ ದಕ್ಷಿಣ ರಾಜ್ಯಕ್ಕೂ ವ್ಯಾಪಿಸಿದೆ. ತೆಲಂಗಾಣದ ಸಿಕಂದರಾಬಾದ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೂರು ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ.

ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶದಲ್ಲೂ ಪ್ರತಿಭಟನೆಗಳು ನಡೆದ ಕುರಿತು ವರದಿಯಾಗಿವೆ.

ತೆಲಂಗಾಣ ಪೊಲೀಸರು ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ಆಕ್ರೋಶಗೊಂಡ ಗುಂಪನ್ನು ಚದುರಿಸಲು ವೈಮಾನಿಕ ಗುಂಡಿನ ದಾಳಿ ನಡೆಸಿದ್ದು, ಪ್ರತಿಭಟನೆಗಳು ದೊಡ್ಡ ಪ್ರಮಾಣದ ಹಿಂಸಾಚಾರ ಹಾಗೂ  ಬೆಂಕಿ ಹಚ್ಚುವ ಹಂತಕ್ಕೆ ತಲುಪಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಪ್ರತಿಭಟನಾಕಾರರು ರೈಲು ಹಳಿಗಳ ಮೇಲೆ ಪ್ರತಿಭಟನೆ ನಡೆಸುತ್ತಿದ್ದಾರೆ ಹಾಗೂ  ಕಳೆದ ಮೂರು ಗಂಟೆಗಳಿಂದ ಎಲ್ಲಾ ರೈಲು ಸಂಚಾರವನ್ನು ಸ್ಥಗಿತಗೊಳಿಸಿದ್ದಾರೆ. ಈಗಾಗಲೇ ಮೂರು ರೈಲುಗಳಿಗೆ ಬೆಂಕಿ ಹಚ್ಚಿರುವ ಕೋಪೋದ್ರಿಕ್ತ ಯುವಕರು ರೈಲ್ವೆ ನಿಲ್ದಾಣವನ್ನು ಅತಿಕ್ರಮಿಸಿರುವುದರಿಂದ ಭದ್ರತಾ ಪಡೆಗಳು ಹೆಚ್ಚಿನ ಸಂಖ್ಯೆಯಲ್ಲಿನಿಯೋಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News