×
Ad

ಧ್ವನಿವರ್ಧಕ ಬಳಕೆ ತಡೆಗೆ ಅಭಿಯಾನ ನಡೆಸಿ: ಹೈಕೋರ್ಟ್ ನಿರ್ದೇಶನ

Update: 2022-06-17 17:20 IST

ಬೆಂಗಳೂರು, ಜೂ.17: ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ತಡೆಗೆ ಅಭಿಯಾನ ನಡೆಸಿ ಮೂರು ವಾರಗಳಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸಿ ಎಂದು ಸರಕಾರ ಹಾಗೂ ಪೊಲೀಸ್ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

2010ರ ಶಬ್ದಮಾಲಿನ್ಯ ನಿಯಂತ್ರಣಾ ನಿಯಮಗಳ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ. 

ಸರಕಾರದ ಪರ ವಾದಿಸಿದ ವಕೀಲರು, ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಕೆಗೆ ನಿಬರ್ಂಧ ವಿಧಿಸಲಾಗಿದೆ. ಉತ್ಸವ, ಸಮಾರಂಭಗಳ ವೇಳೆ ರಾತ್ರಿ 10ರಿಂದ 12ಗಂಟೆವರೆಗೆ 15 ದಿನಗಳ ಅವಧಿಗೆ ವಿಶೇಷ ಅನುಮತಿಗೆ ಅವಕಾಶ ನೀಡಲಾಗಿದೆ. ಧ್ವನಿವರ್ಧಕ ಅನುಮತಿಗೆ ಈಗಾಗಲೇ ಸಮಿತಿ ರಚಿಸಲಾಗಿದೆ. ಎರಡು ವರ್ಷಗಳವರೆಗೆ ಮಾತ್ರ ಧ್ವನಿವರ್ಧಕಗಳ ಲೈಸನ್ಸ್ ನೀಡಲಾಗುತ್ತದೆ. ಎರಡು ವರ್ಷಗಳ ನಂತರ ಲೈಸನ್ಸ್ ನವೀಕರಿಸಬಹುದಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. 

ರಾತ್ರಿ ವೇಳೆ ಧ್ವನಿವರ್ಧಕ ಬಳಕೆ ನಿಲ್ಲಿಸಲು ಕೈಗೊಂಡ ಕ್ರಮವೇನು? ಎಷ್ಟು ಧಾರ್ಮಿಕ ಕೇಂದ್ರಗಳಿಗೆ ನೋಟಿಸ್ ನೀಡಿದ್ದೀರಾ? ಧಾರ್ಮಿಕ ಸ್ಥಳಗಳ ಸರ್ವೇ ನಡೆಸಿ ಕ್ರಮ ಕೈಗೊಳ್ಳಿ. ರಾತ್ರಿ ವೇಳೆ ಧ್ವನಿವರ್ಧಕ ಬಳಕೆಗೆ ಅಭಿಯಾನ ನಡೆಸಿ ಎಂದು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದ ನ್ಯಾಯಪೀಠ, ವಿಚಾರಣೆಯನ್ನು 3 ವಾರಗಳ ಕಾಲ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News