ಗಂಗಾವತಿ : ಗುಪ್ತಚರ ಇಲಾಖೆ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

Update: 2022-06-17 13:43 GMT

ಗಂಗಾವತಿ : ಈ ಹಿಂದೆ ಗಂಗಾವತಿ ಗ್ರಾಮೀಣ ವೃತ್ತದ ಪೊಲೀಸ್ ಅಧಿಕಾರಿ ಯಾಗಿದ್ದ ಪ್ರಸ್ತುತ ಪೊಲೀಸ್ ಗುಪ್ತಚರ ಇಲಾಖೆ ಅಧಿಕಾರಿ  ಉದಯರವಿ ಅವರ ಗಂಗಾವತಿ ಮನೆ ಸೇರಿದಂತೆ ವಿವಿಧೆಡೆ ಇರುವ  ಅವರ ಆಪ್ತರ 4  ಮನೆಗಳ ಮೇಲೆ  ಎಸಿಬಿ   ಡಿವೈಎಸ್ಪಿ ಶಿವಕುಮಾರ್  ಹಾಗೂ  ಸಬ್ ಇನ್ಸ್ ಪೆಕ್ಟರ್ ಆಂಜನೇಯ ನೇತೃತ್ವದ  ಅಧಿಕಾರಿಗಳು  ದಾಳಿ ನಡೆಸಿ ಶೋಧ ನಡೆಸಿದ್ದಾರೆ.

ಉದಯರವಿ ಅವರು ಗಂಗಾ ವತಿ ನಗರ ಠಾಣೆ ಗ್ರಾಮೀಣ ಠಾಣೆಗಳಲ್ಲಿ ಪಿ ಐ ಆಗಿ ಕಾರ್ಯ ನಿರ್ವಹಿಸಿದ್ದರು .ಇತ್ತೀಚೆಗಷ್ಟೇ ಬೆಂಗಳೂರಿಗೆ ಪೊಲೀಸ್ ಗುಪ್ತಚರ ಇಲಾಖೆಯ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆ ಗೊಂಡಿದ್ದರು .ಕೆಲ ಜನಪ್ರತಿ ನಿಧಿಗಳು ಮತ್ತು ಉದಯ ರವಿ ಅವರ ಮಧ್ಯೆ ಶೀತಲ ಸಮರದ ಹಿನ್ನೆಲೆಯಲ್ಲಿ ಇತ್ತೀಚೆಗೆ ಕೊಪ್ಪಳಕ್ಕೆ ಭೇಟಿ ನೀಡಿದ್ದ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿಯ ಕೆಲ ಮುಖಂಡರು ದೂರು ಸಲ್ಲಿಸಿ ತನಿಖೆ ನಡೆಸಿ ಮತ್ತು ವರ್ಗಾವಣೆಗೊಳಿಸುವಂತೆ ಒತ್ತಾಯಿಸಿದ್ದರು.

ನಾಲ್ಕು ಮೆನೆಗಳ ಮೇಲೆ ಎಸಿಬಿ ದಾಳಿ :ಪೊಲೀಸ್ ಅಧಿಕಾರಿ ಉದಯರವಿ ಅವರ ಗಂಗಾವತಿ, ಮುದಗಲ್, ಗಂಗಾವತಿಯ ಬೊಂಬು ಬಜಾರ್ ಮತ್ತು ಆಪ್ತನ ಮನೆ ಸೇರಿ ಒಟ್ಟು 4 ಕಡೆ ಎಸಿಬಿ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯಲ್ಲಿ ಎಸಿಬಿ ಡಿವೈಎಸ್ಪಿ ಶಿವಕುಮಾರ್, ಇನ್ಸ್ಪೆಕ್ಟರ್ ಆಂಜನೇಯ ಸೇರಿದಂತೆ ಇತರೆ ಅಧಿಕಾರಿ ಗಳು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದು ಎಸಿಬಿ ದಾಳಿ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News