×
Ad

ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಯೋಗ ದಿನಾಚರಣೆ

Update: 2022-06-17 20:30 IST

ಉಡುಪಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ನ್ಯಾಯಾಂಗ ಇಲಾಖೆ ಹಾಗೂ ಅಭಿಯೋಜನಾ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಜೂನ್ ೨೧ ರಂದು ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಇದರಲ್ಲಿ ನ್ಯಾಯಾಧೀಶರು, ವಕೀಲರು, ಅಭಿಯೋಜಕರು ಮತ್ತು ನ್ಯಾಯಾಲಯ ಸಿಬ್ಬಂದಿಗಳು ಭಾಗವಹಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News