×
Ad

ನಾಲ್ಕನೇ ಟ್ವೆಂಟಿ-20: ದಕ್ಷಿಣ ಆಫ್ರಿಕಾಕ್ಕೆ 170 ರನ್ ಗುರಿ ನೀಡಿದ ಭಾರತ

Update: 2022-06-17 21:11 IST
PHOTO:TWITTER

ರಾಜ್‌ಕೋಟ್, ಜೂ. 17: ಮಧ್ಯಮ ಕ್ರಮಾಂಕದ ಬ್ಯಾಟರ್ ದಿನೇಶ್ ಕಾರ್ತಿಕ್ ಜೀವನಶ್ರೇಷ್ಠ ಇನಿಂಗ್ಸ್(55 ರನ್, 27 ಎಸೆತ, 9 ಬೌಂಡರಿ, 2 ಸಿಕ್ಸರ್)ಹಾಗೂ ಹಾರ್ದಿಕ್ ಪಾಂಡ್ಯ(46 ರನ್, 31 ಎಸೆತ, 3 ಬೌಂಡರಿ, 3 ಸಿಕ್ಸರ್)ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಆರಂಭಿಕ ಕುಸಿತದಿಂದ ಚೇತರಿಸಿಕೊಂಡ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡಕ್ಕೆ 4ನೇ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯದ ಗೆಲುವಿಗೆ 170 ರನ್ ಗುರಿ ನೀಡಿದೆ.

ಶನಿವಾರ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿದೆ.

 ಭಾರತವು 7ನೇ ಓವರ್‌ಗಳಲ್ಲಿ 40 ರನ್ ಗಳಿಸುವಷ್ಟರಲ್ಲಿ ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್(5 ರನ್), ಶ್ರೇಯಸ್ ಅಯ್ಯರ್(4 ರನ್)ಹಾಗೂ ಇಶಾನ್ ಕಿಶನ್(27) ಬೇಗನೆ ವಿಕೆಟ್ ಕೈಚೆಲ್ಲಿದರು. ಲೋಕಲ್ ಹೀರೊ ಹಾರ್ದಿಕ್ ಪಾಂಡ್ಯ ಅವರು ನಾಯಕ ರಿಷಭ್ ಪಂತ್‌ರೊಂದಿಗೆ 4ನೇ ವಿಕೆಟ್‌ಗೆ 41 ರನ್ ಸೇರಿಸಿ ಇನಿಂಗ್ಸ್‌ಗೆ ಶಕ್ತಿ ತುಂಬಿದರು.

ಹಾರ್ದಿಕ್ ಪಾಂಡ್ಯ ಹಾಗೂ ಹಿರಿಯ ಬ್ಯಾಟರ್ ದಿನೇಶ್ ಕಾರ್ತಿಕ್ 5ನೇ ವಿಕೆಟ್‌ಗೆ 33 ಎಸೆತಗಳಲ್ಲಿ 65 ರನ್ ಜೊತೆಯಾಟ ನಡೆಸಿ ತಂಡವು ಸ್ಪರ್ಧಾತ್ಮಕ ಮೊತ್ತ ಗಳಿಸಲು ನೆರವಾದರು. ಬೌಲಿಂಗ್ ವಿಭಾಗದಲ್ಲಿ ಲುಂಗಿ ಗಿಡಿ(2-20)ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News