ಬೆಂಗಳೂರು | ಸ್ಪಾ ಮೇಲೆ ಸಿಸಿಬಿ ದಾಳಿ: ವಿದೇಶಿ ಯುವತಿಯರ ರಕ್ಷಣೆ
Update: 2022-06-17 23:09 IST
ಬೆಂಗಳೂರು, ಜೂ.17: ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಸ್ಪಾವೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದು, ಏಳು ವಿದೇಶಿ ಯುವತಿಯರು ಸೇರಿದಂತೆ 8 ಮಂದಿಯನ್ನು ರಕ್ಷಿಸಿದ್ದಾರೆ.
ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯ 13ನೇ ಕ್ರಾಸ್, ಉಪ್ಪಾರು ಪ್ಯಾಲೇಸ್, ಆರ್ಚಡ್ಸ್, 2ನೆ ಮಹಡಿಯಲ್ಲಿ ಸಿಯಾಮೆಸೆ ಥೈಸ್ಪಾದಲ್ಲಿ ಹೊರರಾಜ್ಯ ಹಾಗೂ ಹೊರದೇಶದ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.
ಆನಂತರ ಕೇಂದ್ರ ಅಪರಾಧ ವಿಭಾಗದ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವೇಶ್ಯಾ ವಾಟಿಕೆ ನಡೆಸುತ್ತಿದ್ದ ಅರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆಸಲಾಗಿದೆ.