×
Ad

ಬೆಂಗಳೂರು: ಭಾರೀ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಯುವಕ

Update: 2022-06-18 11:16 IST

ಬೆಂಗಳೂರು: ನಗರದಲ್ಲಿ ಶುಕ್ರವಾರ ತಡರಾತ್ರಿ ಮಳೆ ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ರಾಜಕಾಲುವೆಯಲ್ಲಿ 24 ವರ್ಷದ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆಂದು ತಿಳಿದುಬಂದಿದೆ.

ನಗರದ ಕೆ.ಆರ್.ಪುರಂನ ಗಾಯಿತ್ರಿ ಬಡಾವಣೆಯಲ್ಲಿ ಘಟನೆ ನಡೆದಿದೆ.

ಶಿವಮೊಗ್ಗ ಮೂಲದ ಮಿಥಿನ್ ಸಾಗರ್ ನೀರುಪಾಲಾದ ಯುವಕ ಎಂದು ತಿಳಿದು ಬಂದಿದೆ.  ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಕೆ ಆರ್ ಪುರಂ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. 

ಕಳೆದ ರಾತ್ರಿ (ಶುಕ್ರವಾರ) ಸುಮಾರು 11ರಿಂದ 12ರ ನಡುವೆ ಸುರಿದ ಮಳೆಗೆ ಚರಂಡಿಗೆ ಹೊಂದಿಕೊಂಡಿರುವ ಕಾಂಪೌಂಡ್ ಗೋಡೆ ಕುಸಿದು ಮನೆ ಬಳಿ ನಿಲ್ಲಿಸಿದ್ದ ಬೈಕ್‌ಗಳ ಮೇಲೆ ಬಿದ್ದಿದೆ. ಕಾಂಪೌಂಡ್ ಗೋಡೆ ಕುಸಿದ ಶಬ್ಧ ಕೇಳಿ ಮಿಥುನಾ ಹೊರಗಡೆ ಬಂದಿದ್ದಾನೆ.  ಈ ವೇಳೆ ಕೊಚ್ಚಿಕೊಂಡು ಹೋಗಿದ್ದಾನೆ. ಚರಂಡಿ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಬೈಕ್ ನ್ನು ಮೂವರು ಎಳೆಯಲು ಯತ್ನಿಸಿದ್ದಾರೆ. ಈ ವೇಳೆ ದುರಾದೃಷ್ಟವಶಾತ್ ಮಿಥುನಾ ನೀರಿನಲ್ಲಿ ಕೊಚ್ಚಿಹೋಗಿದ್ದಾನೆ. ಮಿಥುನಾ ಕೊಚ್ಚಿ ಹೋಗುತ್ತಿರುವುದನ್ನು ನೋಡಿದ ಇಬ್ಬರು ಕೂಗಾಡಿದ್ದಾರೆ. ಬಳಿಕ ಸ್ಥಳೀಯ ನಿವಾಸಿಗಳು ಬಿಬಿಎಂಪಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ಕೆ.ಆರ್.ಪುರಂನ ಗಾಯಿತ್ರಿ ಬಡಾವಣೆಯ ಸ್ಥಳಿಯರೊಬ್ಬರು ತಿಳಿಸಿದ್ದಾರೆ.  

ಮತ್ತೊಂದು ಘಟನೆಯಲ್ಲಿ ತಡರಾತ್ರಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಮುನಿಯಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News