VIDEO- ಚಕ್ರತೀರ್ಥ ಸಮಿತಿಯ ಪಠ್ಯ ಪರಿಷ್ಕರಣೆ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಜಾಥಾ ಪ್ರಾರಂಭ
Update: 2022-06-18 11:26 IST
ಬೆಂಗಳೂರು, ಜೂ. 18:ಪಠ್ಯಪರಿಷ್ಕರಣೆಯ ಹೆಸರಿನಲ್ಲಿ ಶಿಕ್ಷಣವನ್ನು ಕೇಸರಿಕರಣ ಮಾಡಲಾಗುತ್ತಿದೆ. ಅಲ್ಲದೆ, ಕುವೆಂಪು ಸೇರಿದಂತೆ ಗಣ್ಯರಿಗೆ ಅವಮಾನ ಮಾಡಲಾಗಿದೆ. ಇದಕ್ಕೆ ಕಾರಣರಾದ ಪಠ್ಯಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಬಂಧಿಸುವಂತೆ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆ ಆರಂಭಗೊಂಡಿತು.
ಪ್ರತಿಭಟನಾಕಾರರು ನಗರದ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಜಾಥಾ ಹೊರಟಿದ್ದು, ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ.