ಕೃಷಿ ಕಾನೂನು ಹಿಂಪಡೆದಂತೆ 'ಅಗ್ನಿಪಥ್' ಕೂಡಾ ಹಿಂಪಡೆಯಬೇಕಾಗುತ್ತದೆ: ರಾಹುಲ್ ಗಾಂಧಿ

Update: 2022-06-18 06:55 GMT

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನುಗಳನ್ನು ಹಿಂಪಡೆದಂತೆಯೇ ಯುವಕರ ಬೇಡಿಕೆಯನ್ನು ಒಪ್ಪಿಕೊಂಡು ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಹಿಂಪಡೆಯಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

 ಸತತ ಎಂಟು ವರ್ಷಗಳಿಂದ ಬಿಜೆಪಿ ಸರ್ಕಾರವು 'ಜೈ ಜವಾನ್, ಜೈ ಕಿಸಾನ್' ಮೌಲ್ಯಗಳನ್ನು ಅವಮಾನಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಅಗ್ನಿಪಥ್ ವಿರುದ್ಧದ ಪ್ರತಿಭಟನೆಯ ವೇಳೆ ತೆಲಂಗಾಣದ ಸಿಕಂದರಾಬಾದ್‌ನಲ್ಲಿ ಪೊಲೀಸ್ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ, ರೈಲುಗಳು ಬೆಂಕಿಗೆ ಆಹುತಿಯಾಗಿವೆ ಮತ್ತು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳು ಧ್ವಂಸಗೊಂಡಿದೆ. ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ರಾಹುಲ್ ಗಾಂಧಿ ಈ ಪ್ರತಿಕ್ರಿಯೆ ನೀಡಿದ್ದಾರೆ. 

 "ಪ್ರಧಾನಿ ಕರಾಳ ಕೃಷಿ ಕಾನೂನುಗಳನ್ನು ಹಿಂಪಡೆಯಲೇ ಬೇಕಾಗುತ್ತದೆ ಎಂದು ನಾನು ಮೊದಲೇ ಹೇಳಿದ್ದೆ.  ಅದೇ ರೀತಿ ‘ಮಾಫಿವೀರ್’ ಆಗುವ ಮೂಲಕ ದೇಶದ ಯುವಕರ ಬೇಡಿಕೆಯನ್ನು ಒಪ್ಪಿಕೊಂಡು ‘ಅಗ್ನಿಪಥ’ ಯೋಜನೆಯನ್ನು ಕೂಡಾ ಹಿಂಪಡೆಯಲೇ ಬೇಕಾಗುತ್ತದೆ,’’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News