ಜೂ.19ರಿಂದ ಮೈಸೂರು ಅರಮನೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

Update: 2022-06-18 07:59 GMT

ಮೈಸೂರು: ಮೈಸೂರು ಅರಮನೆ ಆರಣದಲ್ಲಿ ಜೂ.21 ರಂದು ವಿಶ್ವ ಯೋಗ ದಿನ ಇರುವುದರಿಂದ ಜೂ.19ರಿಂದ ಜೂ. 21ರವರೆಗೆ ಅರಮನೆಗೆ ಪ್ರವಾಸಿಗರ ವೀಕ್ಷಣೆ ನಿರ್ಬಂಧ ವಿಧಿಸಲಾಗಿದೆ.

ಅರಮನೆ ಆವರಣದಲ್ಲಿ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಿರುವ ಹಿನ್ನಲೆಯಲ್ಲಿ ಪೂರ್ವಬಾವಿ ಕಾರ್ಯಕ್ರಮಗಳು ಪ್ರಗತಿಯಲ್ಲಿರುವುದರಿಂದ ಜೂ.19 ರಿಂದ ಜೂ.21  ಮಂಗಳವಾರ ಮಧ್ಯಾಹ್ನ 12 ಗಂಟೆವರೆಗೆ ಪ್ರಾಸಿಗರಿಗೆ ಅರಮನೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಹಾಗೂ ಅರಮನೆ ಆವರಣದಲ್ಲಿ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಜೂ.18ರ ಶನಿವಾರದಿಂದ  ಜೂ.22 ರ ಬುಧವಾರದವರೆಗೆ ರದ್ದು ಮಾಡಲಾಗಿದೆ ಎಂದು ಅರಮನೆ ಆಡಳಿತ ಮಂಡಳಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News