ಪುತ್ತೂರು: ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸಹಸವಾರೆ ಮೃತ್ಯು

Update: 2022-06-18 14:32 GMT

ಪುತ್ತೂರು: ಟಿಪ್ಪರ್‌ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದ ಸಹಸವಾರೆ ಮೃತಪಟ್ಟ ಘಟನೆ ಪೆರ್ನೆ ಎಂಬಲ್ಲಿ ಶನಿವಾರ ನಡೆದಿದೆ.

ಪುತ್ತೂರು ನಗರದ  ಹಾರಾಡಿಯಲ್ಲಿರು ಪ್ರಜ್ವಲ್ ಸ್ಟೋರ್ಸ್ ನ ಮಾಲಕ ನೆಕ್ಕಿಲಾಡಿ ನಿವಾಸಿ ಬಾಲಕೃಷ್ಣ ಭಟ್ ಎಂಬವರ ಪತ್ನಿ ಪೂರ್ಣಿಮಾ (47 )  ಮೃತರು ಎಂದು ಗುರುತಿಸಲಾಗಿದೆ.

ಬಾಲಕೃಷ್ಣ ದಂಪತಿ ಪೆರ್ನೆಯಲ್ಲಿರು ತಮ್ಮ ತೋಟಕ್ಕೆ ಹೋಗಿದ್ದರು. ಅಲ್ಲಿಂದ ದ್ವಿಚಕ್ರ ವಾಹನದಲ್ಲಿ  ಹೋಗುತ್ತಿದ್ದ  ವೇಳೆ ಲಾರಿ ಢಿಕ್ಕಿ ಹೊಡೆದಿದ್ದು, ಪೂರ್ಣಿಮ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.

ಈ ವೇಳೆ ಆಲಂಕಾರು ಕಡೆಗೆ ಗ್ರಾಮ ವಾಸ್ತವ್ಯಕ್ಕೆ ತೆರಳುತ್ತಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆಗಮಿಸಿದ್ದು, ವಾಹನದಿಂದ ಇಳಿದು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದರು.

ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News