ರಸ್ತೆ ಅಪಘಾತದಲ್ಲಿ ಶಿಕ್ಷಕಿ ಮೃತ್ಯು
Update: 2022-06-18 21:43 IST
ಮಡಿಕೇರಿ: ಹುಲುಸೆ ಬಳಿ ದ್ವಿಚಕ್ರ ವಾಹನ ಮತ್ತು ಪಿಕ್ ಅಪ್ ನಡುವೆ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ನೇರುಗಳಲೆ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಶ್ವಿನಿ (45) ಎಂದು ಗುರುತಿಸಲಾಗಿದೆ.
ಅಶ್ವಿನಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಹಕಾರ್ಯದರ್ಶಿ ಎಚ್.ಎಸ್.ಚೇತನ್ ಅವರ ಪತ್ನಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಭಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.