ಜೂ.20: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಉದ್ಘಾಟನೆ

Update: 2022-06-18 16:54 GMT

ಮಂಗಳೂರು: ಕೌಶಲಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಮಂಗಳೂರು ತಾಲೂಕಿನಲ್ಲಿ ತಾಂತ್ರಿಕ ಕೇಂದ್ರವನ್ನಾಗಿ ಉನ್ನತೀಕರಿಸಲಾಗಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ)ಯನ್ನು ಜೂ.೨೦ರ ಮಧ್ಯಾಹ್ನ ೨:೩೦ಕ್ಕೆ ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಘಾಟನೆಗೊಳ್ಳಲಿದೆ.

ಶಾಸಕ ವೇದವ್ಯಾಸ್ ಕಾಮತ್‌ರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ  ಸುನಿಲ್ ಕುಮಾರ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ ಮತ್ತಿತರರು ಭಾಗವಹಿಸಲಿದ್ದಾರೆ.

ರಾಜ್ಯ ಸರಕಾರ ಟಾಟಾ ಟೆಕ್ನಾಲಜೀಸ್ ಲಿು. ಮತ್ತು ಇತರೆ  ಪಾಲುದಾರರ ಸಹಯೋಗದೊಂದಿಗೆ ರಾಜ್ಯದ ೧೫೦ ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರಗಳನ್ನು ತಾಂತ್ರಿಕ ಕೇಂದ್ರಗಳನ್ನಾಗಿ ಪರಿವರ್ತಿಸಿದೆ. ಇದು ದೇಶದಲ್ಲೇ ನೂತನ ಯೋಜನೆಯಾಗಿದೆ. ತಾಂತ್ರಿಕ ಕೇಂದ್ರಗಳನ್ನಾಗಿ ಉನ್ನತೀಕರಿಸಲಾಗಿರುವ ೧೫೦ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಜೂ.೨೦ರಂದು ಬೆಂಗಳೂರಿನ ವಿಜ್ಞಾನ ಭಾರತಿ ಮುಖ್ಯ ರಸ್ತೆಯಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News